ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ: ಈಶ್ವರ ಖಂಡ್ರೆ ಅಧ್ಯಕ್ಷತೆಯ ಉಪಸಮಿತಿಯ ಸಭೆಯಲ್ಲಿ ನಿರ್ಧಾರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 19, 2023 | 5:12 PM

ಅನಧಿಕೃತವಾದ 34.35 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಆದರೆ. ಆ ಎಲ್ಲ ಸ್ವತ್ತಿಗೂ ನೀರು, ರಸ್ತೆ, ವಿದ್ಯುತ್, ಬೀದಿ ದೀಪ, ಕಸ ವಿಲೇವಾರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಸ್ತಿ ತೆರಿಗೆ ಸಂಗ್ರಹಣೆಯೇ ಮಾರ್ಗವಾಗಿದೆ.

ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ: ಈಶ್ವರ ಖಂಡ್ರೆ ಅಧ್ಯಕ್ಷತೆಯ ಉಪಸಮಿತಿಯ ಸಭೆಯಲ್ಲಿ ನಿರ್ಧಾರ
ಅರಣ್ಯ ಸಚಿವ ಈಶ್ವರ್​ ಖಂಡ್ರೆ
Follow us on

ಬೆಂಗಳೂರು, ಅ.19: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿಯಲ್ಲಿ ಅಕ್ರಮ ಬಡಾವಣೆಗಳಲ್ಲಿ, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿದ ಕಟ್ಟಡಗಳ ಮಾಲೀಕರು ಮೂಲಭೂತ ಸೌಲಭ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಈಶ್ವರ ಖಂಡ್ರೆ (Eshwar Khandre) ಅಧ್ಯಕ್ಷತೆಯ ಉಪಸಮಿತಿಯಲ್ಲಿ ಪ್ರಥಮ ಸಭೆ ಆಯೋಜಿಸಲಾಗಿದ್ದು, ಈ ವೇಳೆ ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ ನೀಡಲು ನಿರ್ಧಾರ ಮಾಡಲಾಗಿದೆ.

ಹೌದು, ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯ ರಚಿಸಲಾಗಿರುವ ಉಪಸಮಿತಿಯ ಸಭೆಯನ್ನು ಇಂದು ನಡೆಸಲಾಗಿತ್ತು.

ಇದನ್ನೂ ಓದಿ:ಬೆಂಗಳೂರು: ಅರಣ್ಯ ಭೂಮಿ ಬದಲಾವಣೆ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ ಖಂಡ್ರೆ

ಈ ವೇಳೆ ‘ಪ್ರಸ್ತುತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿದ್ದು, ಈ ಪೈಕಿ ಸುಮಾರು 20.55 ಲಕ್ಷ ಅಧಿಕೃತ ಆಸ್ತಿಗಳಾಗಿದ್ದು ತೆರಿಗೆ ಪಾವತಿಸುತ್ತಿದ್ದರೆ, ಅನಧಿಕೃತವಾದ 34.35 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಆದರೆ. ಆ ಎಲ್ಲ ಸ್ವತ್ತಿಗೂ ನೀರು, ರಸ್ತೆ, ವಿದ್ಯುತ್, ಬೀದಿ ದೀಪ, ಕಸ ವಿಲೇವಾರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಸ್ತಿ ತೆರಿಗೆ ಸಂಗ್ರಹಣೆಯೇ ಮಾರ್ಗವಾಗಿದ್ದು, ಇಂತಹ ಅನಧಿಕೃತ ಕಟ್ಟಡಗಳಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಬಿ’ ವಹಿಯಲ್ಲಿ ಖಾತೆ ನೀಡಿ, ಆಸ್ತಿ ತೆರಿಗೆ ಸಂಗ್ರಹಿಸುವ ರೀತಿಯಲ್ಲೇ ದಂಡ ಸಹಿತ ಕಟ್ಟಡ ಕಂದಾಯ ಸಂಗ್ರಹಿಸಲು ಶಿಫಾರಸ್ಸು ಮಾಡುವ ಬಗ್ಗೆ ಉಪ ಸಮಿತಿ ಚರ್ಚೆ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ