Sign In

By signing in or creating an account, you agree with Associated Broadcasting Company's Terms & Conditions and Privacy Policy.

BY Vijayendra: ಕುಟುಂಬ ರಾಜಕಾರಣದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೀಗೆ

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೂ ಇದೇ ವೇಳೆ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

BY Vijayendra: ಕುಟುಂಬ ರಾಜಕಾರಣದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೀಗೆ
ಬಿ.ವೈ.ವಿಜಯೇಂದ್ರ
Follow us
TV9 Web
| Updated By: ಆಯೇಷಾ ಬಾನು

Updated on:Mar 23, 2024 | 12:13 PM

ಬೆಂಗಳೂರು, ಮಾರ್ಚ್​.23: ಮೇಕೆದಾಟು ವಿಚಾರದ ಬಗ್ಗೆ ಕಾಂಗ್ರೆಸ್ (Congress) ಸ್ಪಷ್ಟವಾಗಿ ಉತ್ತರಿಸಬೇಕು. ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ. ಅವರು ಈಗ ಸ್ಪಷ್ಟವಾಗಿ ಹೇಳಬೇಕು. ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದೇ ವೇಳೆ ವಿಜಯೇಂದ್ರ ಕಾಂಗ್ರೆಸ್​ ಬಗ್ಗೆ ಲೇವಡಿ ಮಾಡಿದ್ದಾರೆ. ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಅಂದ್ರೆ ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಲು ನಿರ್ಧರಿಸಿದರು. ಈ ಮೂಲಕ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಕನಸು ಇತ್ತು. ಆದ್ರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. BJP ಅಲೆ ಇದೆ, ಸ್ಪರ್ಧಿಸಿದ್ರೆ ಸೋಲ್ತೇವೆಂದು ಗೊತ್ತು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸ್ತೇವೆ ಎಂದರು.

ಎಲ್ಲವೂ ಶಾಂತಿಯುತವಾಗಲಿದೆ. ಎಲ್ಲಾ ಸಮಸ್ಯೆ ಶಮನವಾಗಲಿದೆ, ತಿಳಿಯಾಗಲಿದೆ. ಎಲ್ಲಾ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಸುಭದ್ರವಾಗಿದೆ ಅಂತ ತಿಳಿಸಬೇಕಿದೆ. ನಮ್ಮ ಮುಂದೆ ಎರಡು ಗುರಿ ಇದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ವಿಜಯಪತಾಕೆ ಹಾರಿಸಬೇಕಿದೆ. ಮುಂದಿನ ಬಾರಿ ಸ್ಪಷ್ಟ ಬಹುಮತ ಬರಬೇಕಿದೆ. ಪಕ್ಷದ ಮುಂದಿನ ಭವಿಷ್ಯದ ದೃಷ್ಟಿಯಿಂದ ಪಕ್ಷದಿಂದ ಕೆಲಸ‌ ಆಗಬೇಕಿದೆ. ವಿಧಾನಸಭಾ ಚುನಾವಣೆಯಲ್ಲಿ ಕೂಡ ಉತ್ತಮ‌ ಗೆಲುವಾಗಬೇಕು. ಆ ನಿಟ್ಟಿನಲ್ಲಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ: ಚುನಾವಣಾ ಬಾಂಡ್‌ ಬಳಸುವ ಮುಖ್ಯ ಉದ್ದೇಶವೇನು? ಅರುಣ್​​​​​ ಜೇಟ್ಲಿ ಮಾತನ್ನು ನೆನಪಿಸಿದ ಕೇಂದ್ರ ಸಚಿವ ಗಡ್ಕರಿ ಇನ್ನು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಧ್ಯಮ ಕೇಂದ್ರ ಯಾಕೆ ಅಂತ ಪ್ರಶ್ನೆ ಬರಬಹುದು. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇದೆ. ಮಾಧ್ಯಮರಂಗಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ನಾಲ್ಕನೆ ಅಂಗ ಅಂತಲೂ ಕರೆಸಿಕೊಂಡಿದೆ. ಬಿಜೆಪಿ ಇಂದ ಮೀಡಿಯಾ ಸೆಂಟರ್ ತೆರೆಯಲಾಗಿದೆ. ಸುದ್ದಿ ಪ್ರಸಾರ ಆಗಬೇಕು, ಅನುವು ಆಗಬೇಕು. ಎಲ್ಲಾ ಮೂಲಭೂತ ಸೌಕರ್ಯ ಇರೋ ಕೇಂದ್ರ ಉದ್ಘಾಟನೆ ಮಾಡಲಾಗಿದೆ. ರಾಷ್ಟ್ರೀಯ ನಾಯಕರು ಭೇಟಿ ನೀಡಲಿದ್ದಾರೆ. ಇಲ್ಲಿಯೇ ಎಲ್ಲಾ ಸುದ್ದಿಗೋಷ್ಟಿ ಮಾಡಲಿದ್ದಾರೆ. ಮತ್ತೊಮ್ಮೆ ಮೋದಿ ಸರ್ಕಾರ. ಇದು ಬಿಜೆಪಿ ಕಾರ್ಯಕರ್ತರ ಆಶಯ ಅಲ್ಲ. ದೇಶದ ಜವಾಬ್ದಾರಿಯುತ ನಾಗರೀಕರ ಆಶಯ. ಕೇಂದ್ರದ NDA ಸರ್ಕಾರದ ಜನಪ್ರಿಯ ಯೋಜನೆಗಳು. ಸರ್ಕಾರ ಬಂದು ಹತ್ತು ವರ್ಷಗಳಾದ್ರೂ, ಮೋದಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದು ಮೊದಲ ಬಾರಿ ಈ ರೀತಿ ಆಗಿರೋದು. ದೇಶದ ಜನತೆ ಮೋದಿ ಅವರ ನಾಯಕತ್ವ ಒಪ್ಪಿದ್ದಾರೆ. ಮೋದಿ ಅವರ ಯೋಜನೆ ಮನೆಗೆ ತಲುಪುತ್ತಿದೆ ಅಂತ ಅರ್ಥ ಎಂದು ವಿಜಯೇಂದ್ರ ಹೇಳಿದರು.

ಕುಟುಂಬ ರಾಜಕಾರಣದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಕುಟುಂಬ ರಾಜಕಾರಣದ ಬಗ್ಗೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ ಮಾಡಿದ್ದೆ. ಆಗ ಚುನಾವಣೆಯಲ್ಲಿ ನನ್ನ ಸ್ಪರ್ಧೆಗೆ ಹೈಕಮಾಂಡ್ ಒಪ್ಪಲಿಲ್ಲ. ಬೊಮ್ಮಾಯಿ ಸಿಎಂ‌ ಆಗಿದ್ದಾಗ ಎಂಎಲ್​ಸಿ ಮಾಡಲು ತೀರ್ಮಾನ ಮಾಡಿದ್ರು. ನನ್ನನ್ನು ಎಂಎಲ್​ಸಿ ಮಾಡಲು ಕೋರ್ ಕಮಿಟಿ ತೀರ್ಮಾನಿಸಿತ್ತು. ಆದರೆ, ಅದಕ್ಕೂ ನಮ್ಮ ಹೈಕಮಾಂಡ್ ಒಪ್ಪಲಿಲ್ಲ. ನಮ್ಮ ಪಕ್ಷದ ತೀರ್ಮಾನವೆಂದು ನಾನು ಆಗಲೂ ಒಪ್ಪಿಕೊಂಡೆ. ಜೆ.ಪಿ.ನಡ್ಡಾರವರು ವಿಜಯೇಂದ್ರ ಆಯ್ಕೆ ಏಕೆ ಅಂತಾ ತಿಳಿಸಿದ್ದಾರೆ. ಕುಟುಂಬ ರಾಜಕಾರಣ ಇಲ್ಲ, ಇದನ್ನು ಹೇಳಲು ಸಂಕೋಚವೂ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಬರಲು ಸಾಧ್ಯವಿಲ್ಲ. ಇದಕ್ಕೆ‌ಮೋದಿ ಅವರ ಜನಪ್ರಿಯತೆ ಕಾರಣ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Sat, 23 March 24

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ