Baburao Chinchansur: ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಏಕೈಕ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

Karnataka Legislative council: ರಾಜ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ರಾಜಿನಾಮೆಯಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

Baburao Chinchansur: ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಏಕೈಕ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ
ಪರಿಷತ್ತಿನ ಒಂದು ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 04, 2022 | 4:38 PM

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಕಾಂಗ್ರೆಸ್​ ಪಕ್ಷದ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೇಲ್ಮನೆಯ ಒಂದು ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯಾದ ಶ್ರೀಮತಿ ವಿಶಾಲಾಕ್ಷಿ ಅವರು ಪ್ರಕಟಿಸಿದ್ದಾರೆ.

ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ದಿನಾಂಕ: 11-08-2022ರಂದು ಚುನಾವಣೆಯನ್ನು ನಿಗದಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.

ಆದರೆ, ಪರಿಷತ್ ನ ಒಂದು ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಕಣದಲ್ಲಿ ಯಾರೂ ಇಲ್ಲದ ಕಾರಣ ಏಕೈಕ ಅಭ್ಯರ್ಥಿಯಾಗಿದ್ದ ಬಾಬುರಾವ್ ಚಿಂನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಪ್ತ ಖಾತೆಗಳ ಸಚಿವ

ಬಾಬುರಾವ್ ಚಿಂಚನಸೂರ್ ಹಾಲಿ ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿದ್ದಾರೆ. ಚಿಂಚನಸೂರ್, ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಕ್ಷೇತ್ರದಿಂದ ವಿಧಾನಸಭೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ. ಚಿಂಚನಸೂರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಇದೆ ಗುರುಮಠಕಲ್‌ ನಲ್ಲಿ ಸತತ ಎರಡು ಬಾರಿ ಗೆಲವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು. ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಪ್ತ ಖಾತೆಗಳ ಸಚಿವ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ (ಹಾಲಿ ರಾಜ್ಯ ಸಭಾ ಸದಸ್ಯ) ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಾಬುರಾವ್ ಚಿಂಚನಸೂರ್ ಪ್ರಮುಖ ಕಾರಣಕರ್ತರಾಗಿದ್ದರು.

Published On - 4:25 pm, Thu, 4 August 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ