Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿದು 8 ಜನ ಸಾವು ಕೇಸ್: ವರದಿಯಲ್ಲಿ ಸ್ಫೋಟಕ ಕಾರಣ ಬಹಿರಂಗ

ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನರು ಮೃತಪಟ್ಟ ದುರ್ಘಟನೆಯಲ್ಲಿ, ಸದ್ಯ ಐಐಎಸ್‌ಸಿ ವರದಿ ಬಂದಿದ್ದು, ಸ್ಫೋಟಕ ಕಾರಣ ಬಹಿರಂಗವಾಗಿದೆ. ಘಟನೆ ಸಂಭವಿಸಿದ್ದಾಗ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದರು. ಕಟ್ಟಡ ಮಾಲೀಕರು ಮತ್ತು ಬಿಬಿಎಂಪಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿದು 8 ಜನ ಸಾವು ಕೇಸ್: ವರದಿಯಲ್ಲಿ ಸ್ಫೋಟಕ ಕಾರಣ ಬಹಿರಂಗ
ಬಾಬುಸಾಬ್ ಪಾಳ್ಯ ಕಟ್ಟಡ ಕುಸಿದು 8 ಜನ ಸಾವು ಕೇಸ್: ವರದಿಯಲ್ಲಿ ಸ್ಫೋಟಕ ಕಾರಣ ಬಹಿರಂಗ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 31, 2025 | 6:49 PM

ಬೆಂಗಳೂರು, ಜನವರಿ 31: ಬಾಬುಸಾಬ್ ಪಾಳ್ಯದಲ್ಲಿ (Babusapalya Building Collapse) ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನರು ಮೃತಪಟ್ಟಿದ್ದರು. 2024ರ ಅಕ್ಟೋಬರ್ 22ರಂದು ದುರ್ಘಟನೆ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವರದಿ ಐಐಎಸ್​ಸಿಯಿಂದ ಹೆಣ್ಣೂರು ಪೊಲೀಸರ ಕೈಸೇರಿದೆ. ಸದ್ಯ ಈ ವರದಿ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಕ್ಟೋಬರ್ 22 ರಂದು ಬಾಬುಸಾಬ್ ಪಾಳ್ಯದಲ್ಲಿ ದುರ್ಘಟನೆ ಸಂಭವಿಸಿತ್ತು. ಸಿಎಂ ಸಿದ್ದರಾಮಯ್ಯ ಖುದ್ದು ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಸೂಚಿಸಿದ್ದರು. ಕಟ್ಟಡದ ಅಡಿಪಾಯ ಸರಿಯಾಗಿ ಹಾಕದಿದ್ದಕ್ಕೆ ದುರ್ಘಟನೆ ಕಾರಣವೆನ್ನಲಾಗಿತ್ತು.

ಇದನ್ನೂ ಓದಿ: ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕಟ್ಟಡ ನಿರ್ಮಾಣಕ್ಕೂ ಮೊದಲು ಆಳವಿದ್ದ ಸ್ಥಳ ಎತ್ತರಿಸಲಾಗಿತ್ತು. ಆ ಬಳಿಕ ಪರೀಕ್ಷಿಸದೆ ಸಾಧಾರಣವಾಗಿ ಅಡಿಪಾಯ ಹಾಕಿದ್ದರು. ಕಡಿಮೆ ಪ್ರಮಾಣದಲ್ಲಿ ಫೌಂಡೇಷನ್ ಹಾಕಿ ಎಡವಟ್ಟಾಗಿತ್ತು. ಕಟ್ಟಡದ ತೂಕ ಹೆಚ್ಚಾಗಿ ಪಿಲ್ಲರ್​ಗಳು ಕುಸಿತಗೊಂಡಿದ್ದವು. ಸದ್ಯ ವರದಿ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ದುರ್ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ಸಹ ಸ್ಥಳಕ್ಕೆ ಆಗಮಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿದ್ದ ಹೆಣ್ಣೂರು ಠಾಣಾ ಪೊಲೀಸರು, ಕಟ್ಟಡ ಮಾಲೀಕರಾದ ಮುನಿರಾಜು ರೆಡ್ಡಿ, ಮಗ ಭುವನ್ ರೆಡ್ಡಿ ಬಂಧನವಾಗಿತ್ತು. ಬಿಬಿಎಂಪಿ ಇಂಜಿನಿಯರ್​ಗಳನ್ನ ಅಮಾನತು ಮಾಡಲಾಗಿತ್ತು. ಬರೋಬ್ಬರಿ ಎಂಟು ಜನರು ಕಟ್ಟಡ ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿದ್ದರೆ, ಅದೃಷ್ಟವಶಾತ್ ಮೂವರು ಬದುಕುಳಿದು ಪಾರಾಗಿದ್ದರು.

ಇದನ್ನೂ ಓದಿ: ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣ: ಕರ್ತವ್ಯಲೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿ ಅಮಾನತು

60X40 ಜಾಗದಲ್ಲಿ ಅನಧಿಕೃತ ಮತ್ತು ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರು ಎನ್ನಲಾಗಿತ್ತು. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು, 7 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗ್ತಿತ್ತು. 6ನೇ ಅಂತಸ್ತು ನಿರ್ಮಿಸಲಾಗಿದ್ದು, 7ನೇ ಅಂತಸ್ತಿನ ಕಾಮಗಾರಿ ವೇಳೆ ಕಟ್ಟಡ ಕುಸಿದಿತ್ತು. ನಿರಂತರವಾಗಿ ಕಾರ್ಯಾಚರಣೆ ನಡೆಸಿದ್ರೂ ಆರು ಕಾರ್ಮಿಕರ ಪ್ರಾಣ ಉಳಿಸಿಕೊಳ್ಳಲು ಆಗಲಿಲ್ಲ. ಅರ್ಮಾನ್, ತ್ರಿಪಾಲ್, ಮೊಹಮ್ಮದ್ ಸಾಹಿಲ್, ಶಂಕರ್, ಸತ್ಯರಾಜ್ ಎಂಬುವವರು ಬಲಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!