ಪಿಂಜಾರ, ನದಾಫ್, ಚಪ್ಪರ ಬಂದ್ ಸೇರಿ 13 ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ
ಹಿಂದುಳಿದ ವರ್ಗಗಳ ಪ್ರವರ್ಗ-1ರ ಪಿಂಜಾರ, ನದಾಫ್ ಹಾಗೂ ಇತರೆ 13 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯದ ಅತ್ಯಂತ ಹಿಂದುಳಿದ ವರ್ಗಗಳಾಗಿರುವ ಪಿಂಜಾರ, ನದಾಫ್, ಚಪ್ಪರ ಬಂದ್, ಒಟಾರಿ ಸೇರಿದಂತೆ ಇತರ 13 ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 1 ರ ಪಿಂಜಾರ, ನದಾಫ್ ಹಾಗೂ ಇತರ 13 ಜಾತಿಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಅತ್ಯಂತ ಹಿಂದುಳಿದ ವರ್ಗಗಳಾಗಿರುವ ಪಿಂಜಾರ, ನದಾಫ್, ಚಪ್ಪರ ಬಂದ್, ಒಟಾರಿ ಸೇರಿದಂತೆ ಇತರ 13 ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 1 ರ ಪಿಂಜಾರ, ನದಾಫ್ ಹಾಗೂ ಇತರ 13 ಜಾತಿಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. 1/2 pic.twitter.com/XvVf1vPvGq
— CM of Karnataka (@CMofKarnataka) March 24, 2023
ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 1ರ ಕಸಾಬ್, ಕಸಾಯ್, ಒಟಾರಿ, ನಾಲಬಂದ್, ತಕನರ, ಬಾಜಿಗಾರ್, ಚಪ್ಪರ್ ಬಂದ್ (ಮುಸ್ಲಿಂ), ದರ್ವೇಸು, ಜೋಹರಿ, ಫುಲ್ ಮಾಲಿ, ಪಿಂಜಾರಾ, ಪಿಂಜಾರಿ, ನದಾಫ್, ಲದಾಫ್ ಜಾತಿಗಳಿಗೆ ಈಗಾಗಲೇ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಇದೀಗ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಇದನ್ನೂ ಓದಿ:ರಾಜಕೀಯ ಲಾಭದ ದುರುದ್ದೇಶದ ಪರಿಷ್ಕೃತ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ: ಸಿದ್ದರಾಮಯ್ಯ
SC ST ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟ
ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ (reservation) ಪ್ರಕಟಿಸಿದೆ. ಇಂದು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.
ಸರ್ಕಾರ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ಗಳಿಗೆ ಜನ ಬಲಿಯಾಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:11 am, Sat, 25 March 23