ನವೆಂಬರ್​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ, ಜಯಪ್ರಕಾಶ್​ ಹೆಗ್ಡೆ ಸ್ಪಷ್ಟನೆ

ರಾಜಕೀಯ ಆರೋಪ ಪ್ರತ್ಯಾರೋಪದ ಕಿಡಿ ಹೊತ್ತಿಸಿರುವ ಜಾತಿ ಗಣತಿ ವರದಿ ಬಿಡುಗಡೆ ವಿರುದ್ಧವೇ ಈಗ ಮೇಲಾಟ ಶುರುವಾಗಿದೆ.‌ ಕಾಂತರಾಜ್ ವರದಿಯನ್ನು ಬೆಂಕಿ ಹಾಕಿ ಸುಡಬೇಕು ಎನ್ನುವ ಹಂತಕ್ಕೆ ಬಿಜೆಪಿ ನಾಯಕ ಈಶ್ವರಪ್ಪ ಹೋಗಿದ್ದಾರೆ. ವರದಿಯನ್ನು ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ‌ ಒತ್ತಡ ಹಾಕಲು ಒಕ್ಕಲಿಗ ಸಮುದಾಯ ಮುಂದಾಗಿದೆ. ಇನ್ನು ಈ ವರದಿ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಅದು ಈ ಕೆಳಗಿನಂತಿದೆ.

ನವೆಂಬರ್​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ, ಜಯಪ್ರಕಾಶ್​ ಹೆಗ್ಡೆ ಸ್ಪಷ್ಟನೆ
ಡಾ.ಜಯಪ್ರಕಾಶ್ ಹೆಗ್ಡೆ,
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 04, 2023 | 1:47 PM

ಬೆಂಗಳೂರು, (ನವೆಂಬರ್ 04): ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿ ಗಣತಿ ವರದಿ(Kantharaj Caste Census Report) ಬಿಡುಗಡೆ ಸಂಬಂಧ ವಿರೋಧ ಹೆಚ್ಚಾಗುತ್ತಿದೆ.‌ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸಮಿತಿ ಸಿದ್ಧಪಡಿಸಿರೋ ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿದೆ. ಇದರ ಬೆನ್ನಲ್ಲೇ ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ ನೀಡಲು ಮುಂದಾಗಿದ್ದಾರೆ. ಇದೇ ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಮೊನ್ನೇ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಜಾತಿ ಗಣತಿ ವರದಿ: ಅತ್ತ ಹೈಕಮಾಂಡ್, ಇತ್ತ ಸಮುದಾಯ: ಅಡಕತ್ತರಿಯಲ್ಲಿ ಸಿಲುಕಿದ ಡಿಕೆ ಶಿವಕುಮಾರ್

ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಜಾತಿಗಣತಿ ಬಗ್ಗೆ ಬೆಂಕಿಯುಗುಳಿರೋ ಸಚಿವ ಕೆಎಸ್ ಈಶ್ವರಪ್ಪ, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದಾರೆ.

ಇನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧ ಇಡೀ ದೇಶಕ್ಕೆ ಒಂದು ನೀತಿ ರೂಪಿಸುವತ್ತ ಬಿಜೆಪಿ ಚಿಂತನೆ ನಡೆಸಿದೆ. ಹೀಗಾಗಿ ರಾಜ್ಯದ ಆಯ್ದ ಒಬಿಸಿ ನಾಯಕರನ್ನು ಕೂಡಾ ಸಭೆಗೆ ಆಹ್ವಾನಿಸಿ ರಾಜ್ಯದ ಸ್ಥಿತಿಯ ಬಗ್ಗೆ ಕೂಡಾ ಮಾಹಿತಿ ಪಡೆಯಲಾಗಿದೆ. ಜಾತಿ ಗಣತಿ ವರದಿ ವಿಚಾರವಾಗಿ ಸರ್ಕಾರದಲ್ಲಿ ದ್ವಂದ್ವ ಅಭಿಪ್ರಾಯ ಇದ್ದರೆ ವಿಪಕ್ಷ ಬಿಜೆಪಿ ಮೊದಲು ಸರ್ಕಾರ ತನ್ನ ನಿರ್ಧಾರ ತೆಗೆದುಕೊಳ್ಳಲಿ ಎಂದು ದಾಳ ಉರುಳಿಸಿದೆ.

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು