AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Restrictions: ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ; ಇಲ್ಲಿದೆ ವಿವರ

ಗುರುವಾರ ಈದ್ಗಾ ಮೈದಾನದಲ್ಲಿ ಬಕ್ರೀದ್ ಆಚರಣೆ ಇದೆ. ಹೀಗಾಗಿ, ಸಂಚಾರ ಪೊಲೀಸ್ ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bengaluru Traffic Restrictions: ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Prajwal D'Souza
| Updated By: Ganapathi Sharma

Updated on:Jun 28, 2023 | 6:29 PM

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಬಕ್ರೀದ್ (Bakrid / Eid al-Adha) ಆಚರಣೆ ನಡೆಯಲಿದ್ದು, ಹಲವು ಕಡೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಳಗ್ಗೆ 8 ರಿಂದ 11.30ರವರೆಗೆ ಸಂಚಾರ ವ್ಯತ್ಯಯ ಇರಲಿದೆ. ಪರ್ಯಾಯ ಮಾರ್ಗಗಳ ಕುರಿತಾದ ವಿವರವನ್ನೂ ಬೆಂಗಳೂರು ಸಂಚಾರ ಪೊಲೀಸರು ನೀಡಿದ್ದಾರೆ.

ಗುರುವಾರ ಈದ್ಗಾ ಮೈದಾನದಲ್ಲಿ ಬಕ್ರೀದ್ ಆಚರಣೆ ಇದೆ. ಹೀಗಾಗಿ, ಸಂಚಾರ ಪೊಲೀಸ್ ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ ಬದಲಾವಣೆ?

  • ಬಸವೇಶ್ವರ ವೃತ್ತದಿಂದ ಸಿಐಡಿ ಜಂಕ್ಷನ್‌ವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ ಪ್ರಯಾಣಿಕರು ದೇವರಾಜ ಅರಸು ರಸ್ತೆಯನ್ನು ಬಳಸಲು ಕೋರಲಾಗಿದೆ.
  • ಲಾಲ್‌ಬಾಗ್ ಮುಖ್ಯ ಗೇಟ್‌ನಿಂದ ಕಣ್ಣಪ್ಪ ಪೆಟ್ರೋಲ್ ಬಂಕ್‌ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಯಾಣಿಕರು ಊರ್ವಶಿ, ಸಿದ್ದಯ್ಯ ರಸ್ತೆ, 34ನೇ ಜಂಕ್ಷನ್, ವಿಲ್ಸನ್ ಗಾರ್ಡನ್ ಮುಖ್ಯರಸ್ತೆ ಮತ್ತು ಹೊಸೂರು ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.
  • ಟೋಲ್ ಗೇಟ್ ಜಂಕ್ಷನ್‌ನಿಂದ ಶಿರಸಿ ವೃತ್ತದವರೆಗೆ ಸಂಚಾರ ನಿರ್ಬಂಧಿಸಿರುವುದರಿಂದ ಸಿರ್ಸಿ ವೃತ್ತದಿಂದ ಬಲ ತಿರುವು ಪಡೆದು ಬಿನ್ನಿ ಮಿಲ್, ಟ್ಯಾಂಕ್ ಬಂಡ್ ರಸ್ತೆ, ಮಾಗಡಿ ರಸ್ತೆ ಮತ್ತು ವಿಜಯನಗರ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
  • ಮೈಸೂರು ರಸ್ತೆಯಿಂದ ಸಿಟಿ ಮಾರ್ಕೆಟ್ ಕಡೆಗೆ ಪ್ರಯಾಣಿಸುವವರು ಕಿಮ್ಕೋ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ವಿಜಯನಗರ, ಮಾಗಡಿ ಮುಖ್ಯರಸ್ತೆ ಮತ್ತು ಸಿರ್ಸಿ ವೃತ್ತದ ಮೂಲಕ ಮಾರುಕಟ್ಟೆಗೆ ತೆರಳಬಹುದಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Wed, 28 June 23

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ