Bakrid: ಬಕ್ರೀದ್ ಹಬ್ಬದ ಹಿನ್ನೆಲೆ ಬೆಂಗಳೂರಿನ ಹಲವೆಡೆ ವಾಹನ ಸಂಚಾರದಲ್ಲಿ ಬದಲಾವಣೆ: ಬದಲಿ ಮಾರ್ಗಗಳು ಹೀಗಿವೆ
Bengaluru Traffic Advisory: ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಪುಲಕೇಶಿನಗರ ಮತ್ತು ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ. ಮಿಲ್ಲರ್ಸ್ ರಸ್ತೆ, ಹೇನ್ಸ್ ರಸ್ತೆ, ನಂದಿದುರ್ಗ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಕೆಲವೆಡೆ ವಾಹನ ನಿಲುಗಡೆಗೆ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳು ಹೀಗಿವೆ.

ಬೆಂಗಳೂರು, ಜೂನ್ 07: ಇಂದು ಕರ್ನಾಟಕದೆಲ್ಲೆಡೆ ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ (Eid al-Adha) ಆಚರಣೆ ಜೋರಾಗಿದೆ. ಮುಸ್ಮಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಸಾಮೂಹಿಕ ಪ್ರಾರ್ಥನೆಗೆ ಅಪಾರ ಸಂಖ್ಯೆಯಲ್ಲಿ ಸೇರುವ ಹಿನ್ನೆಲೆ ಬೆಂಗಳೂರು ಸಂಚಾರಿ ಪೊಲೀಸರು ನಗರದಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ (traffic advisory) ಮಾಡಿದ್ದು, ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಆ ಮೂಲಕ ಜನರು ಸಹಕರಿಸುವಂತೆ ಕೋರಿದ್ದಾರೆ.
ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆಯಲ್ಲಿರುವ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ (ಓಲ್ಡ್ ಹಜ್ ಕ್ಯಾಂಪ್) ಬಕ್ರೀದ್ ಹಬ್ಬದ ಪ್ರಾರ್ಥನೆ ಸಲ್ಲಿಸುವ ಪ್ರಯುಕ್ತ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆಗಳು
- ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ಅಂಡರ್ ಬ್ರಿಡ್ಜ್ನಿಂದ ಹೇನ್ಸ್ ರಸ್ತೆ ಜಂಕ್ಷನ್‌ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
- ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
- ನಂದಿದುರ್ಗ ರಸ್ತೆ – ಬೆನ್ಸನ್ ಕ್ರಾಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ಸ್ ರಸ್ತೆ ಜಂಕ್ಷನ್‌ವರೆಗೆ (ಓಲ್ಡ್ ಹಜ್ ಕ್ಯಾಂಪ್) ಎರಡು ಬದಿಯ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು
- ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ ಕಡೆಯಿಂದ ಪುಲಕೇಶಿನಗರ ಕಡೆಗೆ ಸಂಚರಿಸುವ ವಾಹನ ಚಾಲಕರು ಅಥವಾ ಸವಾರರು, ಮಿಲ್ಲರ್ಸ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಂಟೋನ್ಸೆಂಟ್ ರೈಲ್ವೆ ನಿಲ್ದಾಣದ ಮುಂಭಾಗ ಕಂಟೋನ್ಸೆಂಟ್ ರಸ್ತೆಯಲ್ಲಿ ನೇರವಾಗಿ ಸಾಗಿ ಬಂಬೂಬಜಾರ್ ಜಂಕ್ಷನ್ ತಲುಪಿ ನಂತರ ನೇತಾಜಿ ರಸ್ತೆ ಮುಖಾಂತರ ಪುಲಕೇಶಿನಗರ ಕಡೆಗೆ ಸಂಚರಿಸಬಹುದು.
- ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಜಯಮಹಲ್ ರಸ್ತೆ ಕಡೆಗೆ ಸಂಚರಿಸುವವರು ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಧನಕೋಟಿ ರಸ್ತೆಯಲ್ಲಿ ಬಲ ತಿರುವು ಪಡೆದು ಎ.ಎಂ ರಸ್ತೆ ಮುಖಾಂತರ ಬಂಬೂ ಬಜಾರ್ ತಲುಪಿ ಕಂಟೋನ್ಸೆಂಟ್ ರಸ್ತೆಯಲ್ಲಿ ನೇರವಾಗಿ ಸಾಗಿ ಕ್ರೀನ್ಸ್ ರಸ್ತೆ – ತಿಮ್ಮಯ್ಯ ರಸ್ತೆ ಮುಖಾಂತರ ಜಯಮಹಲ್ ರಸ್ತೆ ಕಡೆಗೆ ಸಂಚರಿಸಬಹುದು.
- ನಂದಿದುರ್ಗ ರಸ್ತೆ ಕಡೆಯಿಂದ ಪುಲಕೇಶಿನಗರ ಕಡೆಗೆ ಸಂಚರಿಸುವವರು ನಂದಿದುರ್ಗ ರಸ್ತೆ ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಬೋರ್ ಬಂಕ್ ರಸ್ತೆಯಲ್ಲಿ ಎಡತಿರುವು ಪಡೆದು ನೇರವಾಗಿ ಸಾಗಿ ಪಾಟರಿ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಪುಲಕೇಶಿನಗರ ಕಡೆಗೆ ಸಂಚರಿಸುವುದು.
ನಿಲುಗಡೆ ನಿಷೇಧಿತ ಸ್ಥಳಗಳು
ಕಂಟೋನ್ಸೆಂಟ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ, ಮಿಲ್ಲರ್ಸ್ ರಸ್ತೆ, ನಂದಿದುರ್ಗ ರಸ್ತೆ, ಹೇನ್ಸ್ ರಸ್ತೆ, ನೇತಾಜಿ ರಸ್ತೆ, ಹೆಚ್.ಎಂ.ರಸ್ತೆ, ಎಂ.ಎಂ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ
ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ನವರೆಗೆ ಬಕ್ರೀದ್ ಹಬ್ಬದ ಪ್ರಾರ್ಥನೆ ಹಿನ್ನೆಲೆ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.
ಪರ್ಯಾಯ ಮಾರ್ಗ:
- ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರಕ್ಕೆ ಹೋಗುವ ವಾಹನ ಸವಾರರು ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದುಕೊಂಡು ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್ ಎಡ ತಿರುವು ಲಿಂಗರಾಜಪುರಂ ಪ್ರೈ ಓವರ್, ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದಾಗಿದೆ.
- ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.
- ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.
ನಿಲುಗಡೆ ನಿಷೇಧಿತ ಸ್ಥಳಗಳು:
ಪಾಟರಿ ಸರ್ಕಲ್‌ನಿಂದ ನಾಗವಾರ ಜಂಕ್ಷನ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ.
ಇದನ್ನೂ ಓದಿ: ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ನಿರ್ಮಾಣದ ಹಿಂದಿದೆ ಬೆಂಗಳೂರು ಐಐಎಸ್ಸಿ ಪ್ರೊಫೆಸರ್ 17 ವರ್ಷದ ಶ್ರಮ!
ಇನ್ನು ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡ ಬಕ್ರೀದ್ ಹಬ್ಬ ಆಚರಣೆಯ ಸಲುವಾಗಿ ಬಿಲಾಲ್ ಮಸೀದಿ, ತಿಲಕನಗರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸುವುದರಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ.
ಸಂಚಾರ ನಿರ್ಬಂಧ
- ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಗರ್ ಆಸ್ಪತೆ ಜಂಕ್ಷನ್‌ನಿಂದ ಗುರಪ್ಪ ನವಾಳ ಜಂಕ್ಷನ್ ವರೆಗೆ.
- ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.
- 39ನೇ ಕ್ರಾಸ್ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್‌ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್ ವರೆಗೆ.
ಪರ್ಯಾಯ ಮಾರ್ಗಗಳು:
- ಡೈರಿ ಸರ್ಕಲ್‌ನಿಂದ ಬರುವ ವಾಹನಗಳು ಸಾಗರ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ತಿಲಕ ನಗರ ಮುಖ್ಯ ರಸ್ತೆಯಲ್ಲಿ ಚಲಿಸಿ ಸ್ವಾಗತ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯಲ್ಲಿ ಚಲಿಸಿ, ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಜಯದೇವಾ “ಯು” ಟರ್ನ ಜಂಕ್ಷನ್‌ನಲ್ಲಿ ‘ಯು’ ತಿರುವು ಪಡೆದು ಹೊರ ರಿಂಗ್ ರಸ್ತೆಯಲ್ಲಿ ಚಲಿಸಿ ಜಯದೇವಾ ಜಂಕ್ಷನ್ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಬನ್ನೇರುಘಟ್ನ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಸಂಚರಿಸಬಹುದು.
- ಬನ್ನೇರುಘಟ್ಟ ಮುಖ್ಯ ರಸ್ತೆ ಜಿ ಡಿ ಮರ ಜಂಕ್ಷನ್ (ನೆನ್ಸಿಸ್ ವೆಗಾ ಸಿಟಿ ಮಾಲ್ ಜಂಕ್ಷನ್) ಕಡೆಯಿಂದ ಡೈರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸಾಯಿ ರಾಂ ಜಂಕ್ಷನ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಜಯದೇವಾ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯ ಮುಖಾಂತರ ಸ್ವಾಗತ್ ಜಂಗ್ಟನ್ ತಲುಪಿ ಬಲ ತಿರುವು ಪಡೆದು, ಸಾಗರ್ ಜಂಕ್ಷನ್‌ನಲ್ಲಿ ಎಡಕ್ಕೆ ತಿರುಗಿ ಬನ್ನೇರುವಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು, ಡೈರಿ ಜಂಕ್ಷನ್ ಕಡೆಗೆ ಸಂಚರಿಸುವುದು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:21 am, Sat, 7 June 25







