ಬಾಲಸೋರ್ ರೈಲು ಅಪಘಾತ: ಜನರಲ್ ಮ್ಯಾನೇಜರ್ IRTS ಅಧಿಕಾರಿ ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ

Balasore train accident: ಭೀಕರ ಬಾಲಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದ್ದು, ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಅರ್ಚನಾ ಭಾರತೀಯ ರೈಲ್ವೆ ಸಂಚಾರ ಸೇವೆ ಅಧಿಕಾರಿ.

ಬಾಲಸೋರ್ ರೈಲು ಅಪಘಾತ: ಜನರಲ್ ಮ್ಯಾನೇಜರ್ IRTS ಅಧಿಕಾರಿ ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ
GM ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ
Follow us
ಸಾಧು ಶ್ರೀನಾಥ್​
|

Updated on:Jul 01, 2023 | 10:04 AM

ಭುವನೇಶ್ವರ/ಬೆಂಗಳೂರು ವರದಿ: ಬಾಲಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು (Archana Joshi -General Manager, South Eastern Railway) ಹುದ್ದೆಯಿಂದ ತೆಗೆದುಹಾಕಲಾಗಿದೆ. ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನಿಲ್ ಕುಮಾರ್ ಮಿಶ್ರಾ ಅವರಿಗೆ ಆಗ್ನೇಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಲಾಗಿದೆ. ಅರ್ಚನಾ ಅವರು 1985-ಬ್ಯಾಚ್ ಭಾರತೀಯ ರೈಲ್ವೆ ಸಂಚಾರ ಸೇವೆ (Indian Railway Traffic Service -IRTS) ಅಧಿಕಾರಿ. ಜುಲೈ 30, 2021 ರಂದು ಆಗ್ನೇಯ ರೈಲ್ವೆ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಭಾರತೀಯ ರೈಲ್ವೇ ತನ್ನ ಅಧಿಕೃತ ಹೇಳಿಕೆಯಲ್ಲಿ, “ಬಾಲಾಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚಮಾ ಜೋಶಿ ಅವರು ತಮ್ಮ ಹುದ್ದೆಯಿಂದ ವಜಾಗೊಳಿಸಿದ್ದಾರೆ. ಆಗ್ನೇಯ ರೈಲ್ವೆಯ ಸುದ್ದಿ ಪ್ರಧಾನ ವ್ಯವಸ್ಥಾಪಕರಾಗಲು ಅನಿಲ್ ಕುಮಾರ್ ಮಿಶ್ರಾ ಅವರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.” ಎಂದು ಕಳಿಂಗ ಟಿವಿ ವರದಿ ಮಾಡಿದೆ.

GM ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ

ಬೆಂಗಳೂರು ವರದಿ: ಒಡಿಶಾದ ಬಾಹಾನಗಾ ರೈಲು ದುರಂತದ ಹಿನ್ನೆಲೆ ಯಲ್ಲಿ ಆಗ್ನೇಯ ರೈಲ್ವೆ ಮಹಾ ಪ್ರಬಂಧಕರಾದ ಅರ್ಚನಾ ಜೋಶಿ ಅವರನ್ನು ಬೆಂಗಳೂರಿನ ಯಲಹಂಕದಲ್ಲಿರುವ ರೈಲ್ವೆ ಗಾಲಿ ಹಾಗೂ ಅಚ್ಚು ಕಾರ್ಖಾನೆಗೆ (Yelahanka Wheel and Axle Plant) ಎತ್ತಂಗಡಿ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರೈಲ್ವೆ ಇಲಾಖೆ ಈನ ಸಂಬಂಧ ಶುಕ್ರವಾರ ತಡರಾತ್ರಿ ಆದೇಶ ಹೊರಡಿಸಿದೆ. ಇದರೊಂದಿಗೆ ದುರಂತದ ಬಳಿಕ ಒಟ್ಟು 6 ವಲಯ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದಂತಾಗಿದೆ. ಈಗ 6ನೇಯವರಾಗಿ ಆರ್ಚನಾ ಎತ್ತಂಗಡಿ ಆಗಿದ್ದಾರೆ.

ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತದ ನಂತರ ಸಿಬ್ಬಂದಿ ಪರಾರಿಯಾಗಿರುವ ವರದಿಗಳನ್ನು ತಳ್ಳಿ ಹಾಕಿದ ರೈಲ್ವೇ ಅಧಿಕಾರಿ

ಸಿಗ್ನಲಿಂಗ್ ದೋಷದಿಂದಾಗಿ ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು, ಮುಖ್ಯ ಮಾರ್ಗದಲ್ಲಿ ಸಾಗದೇ ಪಕ್ಕದ ಮಾರ್ಗದಲ್ಲಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 3ನೇ ಮಾರ್ಗದ ಮೇಲೆ ಹೋಗಿ ಬಿದ್ದಿತ್ತು. ಆಗ ಆ ಮಾರ್ಗದಲ್ಲಿ ಬಂದ ಬೆಂಗಳೂರು-ಹೌರಾ ರೈಲು, ಕೋರಮಂಡಲದ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು. ಈ ಸಿಗ್ನಲಿಂಗ್ ದೋಷವು ಸಿಬ್ಬಂದಿ ನಿರ್ಲಕ್ಷ್ಯದಿಂದ ಆಗಿದ್ದು ಎಂಬ ಆರೋಪವಿದ್ದು, ಸಿಬಿಐ ತನಿಖೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 1 July 23

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ