AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬ್ಯಾನ್: ಸಿಎಂ ಮಹತ್ವದ ಆದೇಶ

ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ಉತ್ಪನ್ನಗಳನ್ನೇ ಬಳಸುವಂತೆ ಶುಕ್ರವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬ್ಯಾನ್: ಸಿಎಂ ಮಹತ್ವದ ಆದೇಶ
ಪ್ಲಾಸ್ಟಿಕ್ ಬಾಟಲ್, ಸಿಎಂ ಸಿದ್ದರಾಮಯ್ಯ
ಹರೀಶ್ ಜಿ.ಆರ್​.
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 31, 2025 | 10:31 PM

Share

ಬೆಂಗಳೂರು, ಅಕ್ಟೋಬರ್ 31: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (plastic bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ (Siddaramaiah) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಆದೇಶಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿತ್ತು.’

ಸಿಎಂ ಸಿದ್ದರಾಮಯ್ಯ ಟ್ವೀಟ್

‘ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.

ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ನಾಮಕರಣಕ್ಕೆ ಸರ್ಕಾರ ಚಿಂತನೆ

ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಿಗೆ ಹೊಸದಾಗಿ ಮಹನೀಯರ ಹೆಸರು ನಾಮಕರಣಕ್ಕೆ ಸರ್ಕಾರ ಸಿದ್ಧತೆ ನಡೆಸಿದಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಪ್ರವರ್ತಕರಾದ ವಿಶ್ವಗುರು ಬಸವಣ್ಣ, ಕೀರ್ತನೆಗಳ ಮೂಲಕ ಸಾಮಾಜಿಕ ಜಾಗೃತಿಯನ್ನು ಮೂಡಿಸಿದ ಕನಕದಾಸರು, ಆಧುನಿಕ‌ ಕರ್ನಾಟಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಪರಿವರ್ತನೆಯ ಹರಿಕಾರರಾದ ಡಿ.ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ಚಿಂತೆನೆ ನಡೆಸಿದ್ದು, ಮುಂದಿನ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ತರುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:14 pm, Fri, 31 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ