
ಬೆಂಗಳೂರು, ಅಕ್ಟೋಬರ್ 31: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (plastic bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ (Siddaramaiah) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಆದೇಶಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿತ್ತು.’
ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ… pic.twitter.com/PT92bJXfXW
— Siddaramaiah (@siddaramaiah) October 31, 2025
‘ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.
ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಿಗೆ ಹೊಸದಾಗಿ ಮಹನೀಯರ ಹೆಸರು ನಾಮಕರಣಕ್ಕೆ ಸರ್ಕಾರ ಸಿದ್ಧತೆ ನಡೆಸಿದಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಪ್ರವರ್ತಕರಾದ ವಿಶ್ವಗುರು ಬಸವಣ್ಣ, ಕೀರ್ತನೆಗಳ ಮೂಲಕ ಸಾಮಾಜಿಕ ಜಾಗೃತಿಯನ್ನು ಮೂಡಿಸಿದ ಕನಕದಾಸರು, ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಪರಿವರ್ತನೆಯ ಹರಿಕಾರರಾದ ಡಿ.ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ಚಿಂತೆನೆ ನಡೆಸಿದ್ದು, ಮುಂದಿನ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ತರುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:14 pm, Fri, 31 October 25