AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರುಳಿಗೆ ಸಿಲುಕಿ ಹುಲಿ ಸಾವು, ಕಾಡಾನೆ ದಂತ ನಾಪತ್ತೆ: ತನಿಖೆಗೆ ಆದೇಶಿಸಿದ ಸಚಿವ ರಾಮಲಿಂಗಾರೆಡ್ಡಿ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಸಾವು ಮತ್ತು ಕಾಡಾನೆ ದಂತ ನಾಪತ್ತೆ ಘಟನೆಗಳ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ಗಸ್ತು ಮತ್ತು ಮೇಲ್ವಿಚಾರಣೆಯಲ್ಲಿನ ಲೋಪಗಳ ಬಗ್ಗೆ ಪ್ರಶ್ನಿಸಿರುವ ಸಚಿವರು, ಈ ಘಟನೆಗಳ ಕುರಿತು ವೈಜ್ಞಾನಿಕ ಮತ್ತು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಒಂದು ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಉರುಳಿಗೆ ಸಿಲುಕಿ ಹುಲಿ ಸಾವು, ಕಾಡಾನೆ ದಂತ ನಾಪತ್ತೆ: ತನಿಖೆಗೆ ಆದೇಶಿಸಿದ ಸಚಿವ ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ Image Credit source: tv9 kannada
ಹರೀಶ್ ಜಿ.ಆರ್​.
| Edited By: |

Updated on: Oct 15, 2026 | 7:34 PM

Share

ಮುಖ್ಯಾಂಶಗಳು

  • ಉರುಳಿಗೆ ಸಿಲುಕಿ ಹುಲಿ ಸಾವು, ಕಾಡಾನೆ ದಂತ ನಾಪತ್ತೆ ಕೇಸ್
  • ತನಿಖೆಗೆ ಅರಣ್ಯ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
  • ಒಂದು ವಾರದೊಳಗೆ ಸಮಗ್ರ, ವಿವರ ವರದಿ ಸಲ್ಲಿಕೆಗೆ ಸೂಚನೆ

ಬೆಂಗಳೂರು, ಅಕ್ಟೋಬರ್​​ 15: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಹಾಗೂ ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆ ದಂತ ನಾಪತ್ತೆ ಪ್ರಕರಣಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದವು. ಸದ್ಯ ಈ ಕುರಿತಾಗಿ ಸಮಗ್ರ ತನಿಖೆ ನಡೆಸಿ, ಅರಣ್ಯ ಅಧಿಕಾರಿಗಳ ಕರ್ತವ್ಯಲೋಪವನ್ನು ಪರಿಶೀಲಿಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.

ಇದು ಅತ್ಯಂತ ಗಂಭೀರ ಮತ್ತು ಆತಂಕಕಾರಿಯಾದ ಸಂಗತಿ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಹಾಗೂ ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಮೃತಪಟ್ಟ ಕಾಡಾನೆಯ ದಂತ ನಾಪತ್ತೆಯಾಗಿರುವ ಘಟನೆಗಳು ಅತ್ಯಂತ ಗಂಭೀರ ಮತ್ತು ಆತಂಕಕಾರಿ ಸಂಗತಿ ಆಗಿವೆ. ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಭಾಗದಲ್ಲಿಯೇ ಇಂತಹ ಘಟನೆಗಳು ನಡೆದಿರುವುದು ಅರಣ್ಯ ಇಲಾಖೆಯ ಗಸ್ತು ವ್ಯವಸ್ಥೆ, ಮೇಲ್ವಿಚಾರಣೆ ಮತ್ತು ವನ್ಯಜೀವಿಗಳ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಬಂಡೀಪುರದಲ್ಲಿ ಮತ್ತೆ ಹುಲಿ ಬೇಟೆ ಶಂಕೆ: ಬವಾರಿಯಾ ಗ್ಯಾಂಗ್ ಸಕ್ರಿಯದ ಅನುಮಾನ, ಆನೆ ದಂತವೂ ನಾಪತ್ತೆ!

ಅರಣ್ಯ ಪ್ರದೇಶದೊಳಗೆ ಕಳ್ಳಬೇಟೆಗಾರರು ಪ್ರವೇಶಿಸಿ ಇಂತಹ ಕೃತ್ಯಗಳನ್ನು ಎಸಗಲು ಹೇಗೆ ಸಾಧ್ಯವಾಯಿತು? ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆಯೇ? ಅರಣ್ಯ ಗಸ್ತು ಹಾಗೂ ನಿಗಾ ವ್ಯವಸ್ಥೆಯಲ್ಲಿ ಲೋಪಗಳಿವೆಯೇ? ಇಂತಹ ಘಟನೆಗಳನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ? ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ದೊರೆಯಬೇಕಾಗಿದೆ.

LIVE TV

ವನ್ಯಜೀವಿಗಳ ಸಂರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಅರಣ್ಯ ಪ್ರದೇಶಗಳಲ್ಲಿ ಕಳ್ಳಬೇಟೆ ಮತ್ತು ವನ್ಯಜೀವಿಗಳ ಅಂಗಾಂಗಗಳ ಅಕ್ರಮ ಸಾಗಣೆಯನ್ನು ತಡೆಗಟ್ಟುವುದು ಅರಣ್ಯ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ.

ಅಧಿಕಾರಿಗಳು, ಸಿಬ್ಬಂದಿ ತಪ್ಪು ಕಂಡುಬಂದ್ರೆ ಶಿಸ್ತು ಕ್ರಮ

ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿನ ಲೋಪಗಳ ಪರಿಶೀಲನೆ ಮಾಡಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಮೇಲ್ವಿಚಾರಣೆಯ ಕೊರತೆ ಅಥವಾ ಕರ್ತವ್ಯಲೋಪ ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಡಿಸಿಎಫ್​​​ ಮತ್ತು ಎಸಿಎಫ್​ಗಳಿಂದ ಕಡ್ಡಾಯ ಕ್ಷೇತ್ರ ಪರಿಶೀಲನೆ

ಇನ್ನು ಇಂದಿನಿಂದಲೇ ರಾಜ್ಯದ ಎಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಅರಣ್ಯ ವಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸ್ಥಳದಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ. ಜೊತೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ರಾಜ್ಯದ ಇತರ ಪ್ರಮುಖ ಅರಣ್ಯ ಪ್ರದೇಶಗಳಲ್ಲಿಯೂ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​