ಬೆಂಗಳೂರು: ಮಾನಸಿಕ ಸಮಸ್ಯೆಯಿಂದ ಬಳಲುತಿದ್ದ ಯುವಕ ಸುಚಿರ್ (21) ಎಂಬಾತ ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದ್ಯಾರಣ್ಯಪುರದ ಎನ್ಟಿಐ ಜಂಕ್ಷನ್ ಬಳಿ ನಡೆದಿದೆ. ತಂದೆ ಅಮೇರಿಕಾದಲ್ಲಿ ಉದ್ಯೋಗದಲ್ಲಿದ್ದು, ಕಳೆದ ಒಂದುವರೆ ವರ್ಷದಿಂದ ತಾಯಿ ಜೊತೆ ಬೆಂಗಳೂರಿನಲ್ಲಿ ವಾಸಿಸುತಿದ್ದ ಸುಚಿರ್. ರಾಮಯ್ಯ ಕಾಲೇಜಿನಲ್ಲಿ ವಿದ್ಯಾಬ್ಯಾಸ ಮಾಡುತಿದ್ದನು. ಇತ್ತೀಚಿಗೆ ಮಾನಸಿಕ ಸಮಸ್ಯೆಯಿಂದ ಬಳಲುತಿದ್ದು, ಹಲವು ಬಾರಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದನಂತೆ. ಇದೀಗ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಮೃತದೇಹವನ್ನ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಎಂಟಿಸಿ ಬಸ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಬೆಂಗಳೂರು: ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಬಳಿ ಬಿಎಂಟಿಸಿ ಬಸ್ ಹರಿದು ವೃದ್ಧನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿಗ್ನಲ್ ಬಿದ್ರೂ ರಸ್ತೆ ದಾಟಲು ಮುಂದಾಗಿದ್ದ ವೃದ್ಧನಿಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದಿದೆ. ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸದ್ಯ ಕೆಸಿ ಜನರಲ್ ಆಸ್ಪತ್ರೆಗೆ ಮೃತ ದೇಹವನ್ನ ರವಾನೆ ಮಾಡಲಾಗಿದ್ದು, ಬಸ್ ಚಲಾಯಿಸುತ್ತಿದ್ದ ಡಿಪೋ ನಂ 9 ರ ಚಾಲಕ ಮಹಾಂತೇಶ್ ಎಂಬುವವರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕ್ತಿದ್ದಾರೆ. ಇನ್ನು ಅಪಘಾತದ ಬಳಿಕ ಪ್ರಯಾಣಿಕರಿದ್ದ ಬಸ್ನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Tue, 14 February 23