AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ

ಬೆಂಗಳೂರಿನ ಟೆಕ್ಕಿ ಪಂಕಜ್ ತನ್ವರ್ ಅವರು ಕೃತಕ ಬುದ್ಧಿಮತ್ತೆ (AI) ಆಧಾರಿತ ಹೆಲ್ಮೆಟ್ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಸಂಚಾರ ನಿಯಮ ಉಲ್ಲಂಘಿಸುವವರನ್ನು ನೈಜ ಸಮಯದಲ್ಲಿ ಪತ್ತೆಹಚ್ಚಿ, ಅವರ ವಾಹನ ವಿವರಗಳನ್ನು ಪೊಲೀಸರಿಗೆ ತಕ್ಷಣವೇ ರವಾನಿಸುತ್ತದೆ. ಈ ವೈರಲ್ ಆವಿಷ್ಕಾರವು ನಗರದ ಸಂಚಾರ ಶಿಸ್ತು ಸುಧಾರಿಸಲು ಸಹಾಯಕವಾಗಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ಗಳಿಸಿದೆ. ಸರ್ಕಾರ ಇದನ್ನು ಅಳವಡಿಸಿಕೊಳ್ಳುವಂತೆ ಹಲವರು ಸಲಹೆ ನೀಡಿದ್ದಾರೆ.

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ
ವೈರಲ್​​ ಪೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on: Jan 05, 2026 | 10:19 AM

Share

ಬೆಂಗಳೂರು, ಜ.5: ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಹಲವು  ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್​​ ಇಲಾಖೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ಜನ ಪೊಲೀಸರ ಕಣ್ತಪ್ಪಿಸಿ ಸಂಚಾರ ಉಲ್ಲಂಘನೆ ಮಾಡುತ್ತಾರೆ. ಆದರೆ ಇನ್ಮುಂದೆ ಇದು ಸಾಧ್ಯವಿಲ್ಲ, ಹೊಸ ತಂತ್ರಜ್ಞಾನವೊಂದು ಪರಿಚಯಿಸಿಲಾಗಿದೆ. ನಗರದಲ್ಲಿನ ಸಂಚಾರ ಶಿಸ್ತಿನ ಕಳಪೆ ಸ್ಥಿತಿಯಿಂದ ಬೇಸತ್ತ ಬೆಂಗಳೂರು ಮೂಲದ ತಂತ್ರಜ್ಞನೊಬ್ಬರು ಕೃತಕ ಬುದ್ಧಿಮತ್ತೆ ಮೂಲಕ ಹೆಲ್ಮೆಟ್​​ನ್ನು (AI helmet) ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ನಾನು ಪ್ರತಿದಿನ ಕೆಲವೊಂದು ಜನ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚಾರ ಮಾಡುವುದನ್ನು ನೋಡಿದ್ದೇನೆ. ಇದನ್ನು ನೋಡಿ ನೋಡಿ ಸಾಕಾಗಿದೆ. ಅದಕ್ಕಾಗಿ ನನ್ನ ಹೆಲ್ಮೆಟ್​​ನ್ನು ಎಐ ಸಾಧನವಾಗಿ ಪರಿವರ್ತನೆ ಮಾಡಿ, ಈ ಮೂಲಕ ಪೊಲೀಸರಿಗೆ ಸಂಚಾರ ನಿಯಮ ಉಲ್ಲಂಘಿಸಿದವರ ಮಾಹಿತಿ ನೀಡಲು ಸಹಾಯವಾಗುತ್ತದೆ ಎಂದು ಪಂಕಜ್ ತನ್ವರ್ ತನ್ನ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಎಐ ತಂತ್ರಜ್ಞಾನ ನೈಜ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಹಾಗೂ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದವರ ವಾಹನ ಹಾಗೂ ಮುಖವನ್ನು ಸೆರೆಹಿಡಿಯುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ?

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಈ ಸಾಧನವೂ ಸ್ಥಳ ಮತ್ತು ನಂಬರ್ ಪ್ಲೇಟ್‌ನೊಂದಿಗೆ ನೇರವಾಗಿ ಪೊಲೀಸರಿಗೆ ಸಂಪರ್ಕವನ್ನು ಸಾಧಿಸುತ್ತದೆ. ಬೆಂಗಳೂರಿನ ಜನರೇ, ಈಗ ಸುರಕ್ಷಿತವಾಗಿ ಸವಾರಿ ಮಾಡಿ ಎಂದು ಈ ಪೋಸ್ಟ್​​ನಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್​​ ಓಡಿಸುವವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಕೂಡ ಕಮೆಂಟ್​ ಮಾಡಿದ್ದಾರೆ. ಈ ಪೋಸ್ಟ್​ 1.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಇದೊಂದು ಉತ್ತಮ ತಂತ್ರಜ್ಞಾನ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ಇಂತಹ ತಂತ್ರಜ್ಞಾನಗಳು ಬರಬೇಕು. ಇದನ್ನು ಸರ್ಕಾರ ಬಳಸಿಕೊಂಡು ಸಂಚಾರ ನಿಮಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ