AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರು, ಹುಬ್ಬಳ್ಳಿ ವಾಯು ಗುಣಮಟ್ಟದಲ್ಲಿ ಸುಧಾರಣೆ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ಇಂದು ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಆದರೂ ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಬೆಂಗಳೂರು, ಹುಬ್ಬಳ್ಳಿ ವಾಯು ಗುಣಮಟ್ಟದಲ್ಲಿ ಸುಧಾರಣೆ
ಬೆಂಗಳೂರು, ಹುಬ್ಬಳ್ಳಿ ವಾಯು ಗುಣಮಟ್ಟದಲ್ಲಿ ಸುಧಾರಣೆ Image Credit source: en.wikipedia.org
ಭಾವನಾ ಹೆಗಡೆ
|

Updated on: Apr 04, 2026 | 8:15 AM

Share

ಬೆಂಗಳೂರು, ಏಪ್ರಿಲ್ 04: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –124
  • ಮಂಗಳೂರು-102
  • ಮೈಸೂರು –119
  • ಬೆಳಗಾವಿ – 74
  • ಕಲಬುರ್ಗಿ-99
  • ಶಿವಮೊಗ್ಗ – 104
  • ಬಳ್ಳಾರಿ – 123
  • ಹುಬ್ಬಳ್ಳಿ- 80
  • ಉಡುಪಿ –111
  • ವಿಜಯಪುರ –111

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ