
ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 97ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.