
ಬೆಂಗಳೂರು, ಏಪ್ರಿಲ್ 29: ರಾಜ್ಯದಲ್ಲಿ ಬಳ್ಳಾರಿಯ ವಾಯು ಗುಣಮಟ್ಟ (Bengaluru Air Quality) ಏಕಾಏಕಿ 300ರ ಗಡಿ ದಾಟಿದ್ದು, ಇದೇ ಮೊದಲ ಬಾರಿಗೆ ಈ ಮಟ್ಟದಲ್ಲಿ ಹದಗೆಟ್ಟಿದೆ. ಇಷ್ಟು ದಿನ ಗರಿಷ್ಠ 200ಕ್ಕೆ ತಲುಪುತ್ತಿದ್ದ AQI ಇಂದು ಇಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ವಾಯುಮಾಲಿನ್ಯದ ಮಟ್ಟವು ಅತ್ಯಂತ ಅಪಾಯಕಾರಿ (Hazardous) ಹಂತಕ್ಕೆ ತಲುಪಿದ್ದು, ವಾಯು ಗುಣಮಟ್ಟ ಸೂಚ್ಯಂಕವು (AQI) 356ಕ್ಕೆ ಏರಿಕೆಯಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಉಸಿರಾಟದ ಸಮಸ್ಯೆ ಇರುವವರು ತೀವ್ರ ಸಂಕಷ್ಟಕ್ಕೆ ಒಳಗಾಗಬಹುದು.
ಗಾಳಿಯಲ್ಲಿನ ವಿಷಕಾರಿ ಅಂಶಗಳು ಶ್ವಾಸಕೋಶದ ಕಾಯಿಲೆಗಳಿಗೆ ದಾರಿಯಾಗುವುದರಿಂದ, ಜನರು ತುರ್ತು ಕೆಲಸಗಳಿಲ್ಲದೆ ಹೊರಬರದಂತೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ನಗರದ ಹವಾಮಾನವು ಉಸಿರುಗಟ್ಟಿಸುವಂತಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳ ಅಗತ್ಯವಿದೆ. ಬಳ್ಳಾರಿಯ ಜನತೆ ಈಗ ದೀರ್ಘಕಾಲದ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜಾಗ್ರತೆ ವಹಿಸಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ