
ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.
ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲೂ ಕಡಿಮೆ ಆಗದ AQI, ಇಂದು 192ಕ್ಕೆ ತಲುಪಿದೆ.ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.
PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.