AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 157ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಮಂಗಳೂರು ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುವ ಹಂತದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ
ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ
ಭಾವನಾ ಹೆಗಡೆ
|

Updated on: Feb 01, 2026 | 8:13 AM

Share

ಬೆಂಗಳೂರು, ಫೆಬ್ರುವರಿ 01: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI  (Bengaluru Air Quality) ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು ಹಾಗೂ ಬಳ್ಳಾರಿ ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಬೆಂಗಳೂರಿಗಿಂತ ಮಂಗಳೂರಿನಲ್ಲಿ ಕಳಪೆ ಗಾಳಿ

ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 170ಕ್ಕೆ ಹೋಗಿ ತಲುಪಿದೆ. ಮಂಗಳೂರಿನ AQI 177 ಆಗಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲೂ ಕಡಿಮೆ ಆಗದ AQI, ಇಂದು 157ಕ್ಕೆ ತಲುಪಿದೆ.ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ

PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –157
  • ಮಂಗಳೂರು-177
  • ಮೈಸೂರು –145
  • ಬೆಳಗಾವಿ – 129
  • ಕಲಬುರ್ಗಿ-152
  • ಶಿವಮೊಗ್ಗ – 157
  • ಬಳ್ಳಾರಿ – 170
  • ಹುಬ್ಬಳ್ಳಿ- 144
  • ಉಡುಪಿ –164
  • ವಿಜಯಪುರ –134

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?