AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ!

ಬೆಂಗಳೂರಿನ ವಾಯು ಗುಣಮಟ್ಟವೇ ಕಳಪೆ ಮಟ್ಟಕ್ಕೆ ತಲುಪಿದ್ದರೆ, ಇದನ್ನೂ ಮೀರಿಸಿ ಇಂದು ಬಳ್ಳಾರಿಯು ಅನಾರೋಗ್ಯಕರ AQI ಹೊಂದಿದೆ. ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬಳ್ಳಾರಿಯ ಗಾಳಿಯ ಕ್ವಾಲಿಟಿ, ಇಂದೂ ಮತ್ತೊಮ್ಮೆ ಅದೇ ಹಂತಕ್ಕೆ ತಲುಪಿದೆ. ಇದರಿಂದ ಸ್ಥಳೀಯರ ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ!
ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ
ಭಾವನಾ ಹೆಗಡೆ
|

Updated on: Jan 24, 2026 | 8:23 AM

Share

ಬೆಂಗಳೂರು, ಜನವರಿ 24: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ (Bengaluru Air Quality) ಆತಂಕಕಾರಿ ಮಟ್ಟದಲ್ಲಿಯೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ 165 ಇದ್ದು, ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ರಾಜಧಾನಿಯನ್ನೂ ಮೀರಿಸುವಷ್ಟು AQI ಹೊಂದಿರುವುದು ಬಳ್ಳಾರಿ. ಕೆಲ ತಿಂಗಳ ಹಿಂದೆಯೂ ಒಮ್ಮೆ ಬಳ್ಳಾರಿಯ ವಾಯ ಗುಣಮಟ್ಟ 200ಕ್ಕೇರಿತ್ತು. ಅದಾದ ಬಳಿಕ ಇಂದು ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ.

200ರ ಗಡಿ ದಾಟಿದ ಬಳ್ಳಾರಿಯ AQI

ಕೆಲ ದಿನಗಳ ಹಿಂದೆ ಬಳ್ಳಾರಿಯ ಗಾಳಿಯ ಗುಣಮಟ್ಟ 150ರ ಆಸುಪಾಸಿನಲ್ಲಿತ್ತು. ಆದರಿಂದು ಏಕಾಏಕಿ 224ಕ್ಕೆ ತಲುಪಿರುವುದು ಆತಂಕ ಸೃಷ್ಟಿಸಿದೆ. ಇದು ಬೆಂಗಳೂರಿಗಿಂತ ಕಳಪೆ ಗುಣಮಟ್ಟದ ಏರ್ ಕ್ವಾಲಿಟಿಯಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –165
  • ಮಂಗಳೂರು-169
  • ಮೈಸೂರು –172
  • ಬೆಳಗಾವಿ – 104
  • ಕಲಬುರ್ಗಿ-150
  • ಶಿವಮೊಗ್ಗ – 160
  • ಬಳ್ಳಾರಿ – 224
  • ಹುಬ್ಬಳ್ಳಿ- 153
  • ಉಡುಪಿ –158
  • ವಿಜಯಪುರ –53

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ