AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರು ಸೇರಿದಂತೆ ಹುಬ್ಬಳ್ಳಿಯ ಏರ್ ಕ್ವಾಲಿಟಿ ಉತ್ತಮ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಕಂಡಿದ್ದು, ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಉಡುಪಿ ಮತ್ತು ಮಂಗಳೂರು AQI ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಬೆಂಗಳೂರು ಸೇರಿದಂತೆ ಹುಬ್ಬಳ್ಳಿಯ ಏರ್ ಕ್ವಾಲಿಟಿ ಉತ್ತಮ
ಬೆಂಗಳೂರು ಸೇರಿದಂತೆ ಹುಬ್ಬಳ್ಳಿಯ ಏರ್ ಕ್ವಾಲಿಟಿ ಉತ್ತಮ
ಭಾವನಾ ಹೆಗಡೆ
|

Updated on: May 02, 2026 | 7:46 AM

Share

ಬೆಂಗಳೂರು, ಮೇ 02: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿಯ ಏರ್ ಕ್ವಾಲಿಟಿ ಇಂದು ಕೇವಲ 72ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 109ಕ್ಕೆ ತಲುಪಿದೆ. ಮಂಗಳೂರು ಮತ್ತು ಉಡುಪಿಯ AQI 100ಕ್ಕಿಂತ ಹೆಚ್ಚಿದ್ದು, ಅನಾರೋಗ್ಯಕರ ಮಟ್ಟದಲ್ಲಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 109
  • ಮಂಗಳೂರು-115
  • ಮೈಸೂರು – 117
  • ಬೆಳಗಾವಿ – 46
  • ಕಲಬುರ್ಗಿ-90
  • ಶಿವಮೊಗ್ಗ –112
  • ಬಳ್ಳಾರಿ – 103
  • ಹುಬ್ಬಳ್ಳಿ- 72
  • ಉಡುಪಿ –113
  • ವಿಜಯಪುರ – 75

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ