AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ!

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಚೇತರಿಸಿದೆ. ಆದರೂ ಗಾಳಿಯ ಗುಣಮಟ್ಟ ಆತಂಕಕಾರಿ ಹಂತದಲ್ಲಿಯೇ ಇದ್ದು, ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ!
ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ!
ಭಾವನಾ ಹೆಗಡೆ
|

Updated on: Jan 27, 2026 | 8:08 AM

Share

ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ.

ಬೆಂಗಳೂರಿನ ಏರ್ ಕ್ವಾಲಿಟಿ 129 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –129
  • ಮಂಗಳೂರು-158
  • ಮೈಸೂರು –98
  • ಬೆಳಗಾವಿ – 118
  • ಕಲಬುರ್ಗಿ-141
  • ಶಿವಮೊಗ್ಗ – 130
  • ಬಳ್ಳಾರಿ – 153
  • ಹುಬ್ಬಳ್ಳಿ- 114
  • ಉಡುಪಿ –162
  • ವಿಜಯಪುರ –88

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು