
ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ.
ಬೆಂಗಳೂರಿನ ಏರ್ ಕ್ವಾಲಿಟಿ 129 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.