
ಬೆಂಗಳೂರು, ಜನವರಿ 02: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 161 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 70 ಇದ್ದರೆ, PM10 95 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.
ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಅರೆಕೆರೆ-165, ಬಾಪೂಜಿ ನಗರ-154, ಬ್ರಿಗೇಡ್ ರೋಡ್-158, ಬ್ರೂಕ್ ಫೀಲ್ಡ್- 163, BTM ಲೇಔಟ್- 158, ಹೆಬ್ಬಾಳ- 161 , ಜಯನಗರ-175, ಕೋರಮಂಗಲ-172, ಸಿಲ್ಕ್ ಬೋರ್ಡ್-168, ತಾವರೆಕೆರೆ-170, ವೈಟ್ಫೀಲ್ಡ್- 189 ಇದ್ದು, ಇಷ್ಟು ಹದಗೆಟ್ಟ ಏರ್ ಕ್ವಾಲಿಟಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ ಕೊಡುಗೆ ನೀಡುತ್ತಿದೆ.
PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.