AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತವಾಗಿದೆ. AQI 167, PM2.5 ಮತ್ತು PM10 ಮಟ್ಟಗಳು ಹೆಚ್ಚಿದ್ದು ಶ್ವಾಸಕೋಶ, ಅಸ್ತಮಾ ಹಾಗೂ ಹೃದಯ ರೋಗಗಳ ಭೀತಿ ಹೆಚ್ಚುತ್ತಿದೆ. 2025ರಲ್ಲಿ ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ ದಾಖಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡಿದ್ದಾರೆ.

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ!
ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ!
ಭಾವನಾ ಹೆಗಡೆ
|

Updated on: Jan 03, 2026 | 7:24 AM

Share

ಬೆಂಗಳೂರು, ಜನವರಿ 03: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 167 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 79 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.

2025ರಲ್ಲಿ ಗಾಳಿಯ ಗುಣಮಟ್ಟ ಹೇಗಿತ್ತು?

ವಿಶೇಷವಾಗಿ BTM, ಜೆ. ಪಿ. ನಗರ್, ಹೆಬ್ಬಲ್, ಸಿಲ್ಕ್‌ಬೋರ್ಡ್ ಮುಂತಾದ ಪ್ರದೇಶಗಳಲ್ಲಿ PM2.5 ಮಟ್ಟ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಇದು ಸಾಮಾನ್ಯವಾಗಿ ಸಂವೆದನಶೀಲ ಗುಂಪಿನವರ ಮೇಲೆ ಖಾಸಗಿ ಪರಿಣಾಮ ಬೀರಬಹುದು ಮತ್ತು ಹೊರಗಡೆ ದೀರ್ಘ ಕಾಲ ಇದ್ದರೆ ಆರೋಗ್ಯದ ಮೇಲೆ ಹಾನಿ ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ. 2025 ರಲ್ಲಿ, ಬೆಂಗಳೂರು ನಗರದಲ್ಲಿ ವಾಯು ಗುಣಮಟ್ಟ ಹಂತ ಹಂತವಾಗಿ ಹಾನಿಕರ ದಿಕ್ಕಿನಲ್ಲಿ ಬದಲಾಗಿದೆ.

ವರ್ಷಾಂತ್ಯದ ಅಂಕಿಅಂಶಗಳನ್ನು ನೋಡಿದರೆ 2025 ರಲ್ಲಿ ನಗರವು ಕಳೆದ ಐದು ವರ್ಷಗಳಲ್ಲಿ ಅತ್ಯಂತ ಕೆಟ್ಟ ವಾಯು ಗುಣಮಟ್ಟವನ್ನು ದಾಖಲಿಸಿದೆ . ವರ್ಷದಲ್ಲಿ ಬಹುತೇಕ ದಿನಗಳು ಮಧ್ಯಮದಿಂದ ಅನಾರೋಗ್ಯಕರ ಮಟ್ಟದವರೆಗೆ ತಲುಪಿದ್ದು, 2024 ರೊಂದಿಗೆ ಹೋಲಿಸಿದರೆ ಗುಣಮಟ್ಟದಲ್ಲಿ ಬಹುದೊಡ್ಡ ಕುಸಿತ ಕಂಡಿದೆ. 2025 ರ ಡಿಸೆಂಬರ್‌ನಲ್ಲಿ ಸರಾಸರಿ 143 ಸರಾಸರಿ AQI ರೇಟ್ ಕಂಡು ಬಂದಿದೆ. ನಗರದಲ್ಲಿ ವಾಹನಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗಿದೆ. ರಸ್ತೆಯಿಂದ ಹೊಮ್ಮುವ ಧೂಳು, ಕಟ್ಟಡ ನಿರ್ಮಾಣದ ಧೂಳು ಮತ್ತು ಚಳಿಗಾಲದ ಮಂಜಿನ ಪರಿಣಾಮಗಳು ಈ ಕಳಪೆ ಗುಣಮಟ್ಟಕ್ಕೆ ಕಾರಣವಾಗಿದೆ ಎಂದು ವಾಯು ಗುಣಮಟ್ಟ ತಜ್ಞರು ಹೇಳುತ್ತಾರೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –167
  • ಮಂಗಳೂರು-155
  • ಮೈಸೂರು – 126
  • ಬೆಳಗಾವಿ – 159
  • ಕಲಬುರ್ಗಿ – 110
  • ಶಿವಮೊಗ್ಗ – 182
  • ಬಳ್ಳಾರಿ – 185
  • ಹುಬ್ಬಳ್ಳಿ- 96
  • ಉಡುಪಿ –110
  • ವಿಜಯಪುರ –117

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?