AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಇನ್ನೂ ಕಳಪೆ ಮಟ್ಟಕ್ಕಿಳಿದ ಬೆಂಗಳೂರಿನ ವಾಯು ಗುಣಮಟ್ಟ!

ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ. ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಇನ್ನೂ ಕಳಪೆ ಮಟ್ಟಕ್ಕಿಳಿದ ಬೆಂಗಳೂರಿನ ವಾಯು ಗುಣಮಟ್ಟ!
ಇನ್ನೂ ಕಳಪೆ ಮಟ್ಟಕ್ಕಿಳಿದ ಬೆಂಗಳೂರಿನ ವಾಯು ಗುಣಮಟ್ಟ!
ಭಾವನಾ ಹೆಗಡೆ
|

Updated on: Mar 09, 2026 | 8:00 AM

Share

ಬೆಂಗಳೂರು, ಮಾರ್ಚ್​ 09: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 174ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 151 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –174
  • ಮಂಗಳೂರು-171
  • ಮೈಸೂರು –162
  • ಬೆಳಗಾವಿ – 156
  • ಕಲಬುರ್ಗಿ-151
  • ಶಿವಮೊಗ್ಗ – 176
  • ಬಳ್ಳಾರಿ – 156
  • ಹುಬ್ಬಳ್ಳಿ- 161
  • ಉಡುಪಿ –164
  • ವಿಜಯಪುರ –164

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ