Bengaluru Air Quality: ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ!

ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಅಂತೆಯೇ ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

Bengaluru Air Quality: ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ!
ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ!

Updated on: Mar 04, 2026 | 8:24 AM

ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 195 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –166
  • ಮಂಗಳೂರು-150
  • ಮೈಸೂರು –157
  • ಬೆಳಗಾವಿ – 158
  • ಕಲಬುರ್ಗಿ-195
  • ಶಿವಮೊಗ್ಗ – 153
  • ಬಳ್ಳಾರಿ – 163
  • ಹುಬ್ಬಳ್ಳಿ- 152
  • ಉಡುಪಿ –136
  • ವಿಜಯಪುರ –162

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us