
ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 169ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 183 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 173 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.