AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ

ಬೆಂಗಳೂರಿನೊಂದಿಗೆ ಕಲಬುರ್ಗಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

Bengaluru Air Quality: ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ
ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ
ಭಾವನಾ ಹೆಗಡೆ
|

Updated on: Feb 27, 2026 | 8:39 AM

Share

ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಕಲಬುರ್ಗಿ ಸೇರಿದಂತೆ ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ತೀವ್ರ ಕುಸಿತ ಕಂಡಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 168ಕ್ಕೆ ತಲುಪಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಉಡುಪಿಯ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –168
  • ಮಂಗಳೂರು-118
  • ಮೈಸೂರು –150
  • ಬೆಳಗಾವಿ – 112
  • ಕಲಬುರ್ಗಿ-152
  • ಶಿವಮೊಗ್ಗ – 112
  • ಬಳ್ಳಾರಿ – 148
  • ಹುಬ್ಬಳ್ಳಿ- 119
  • ಉಡುಪಿ –113
  • ವಿಜಯಪುರ –141

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ