AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ವಾಹನ ಸಂಖ್ಯೆಯೂ ನೀಡುತ್ತಿದೆ ಕಳಪೆ ಏರ್ ಕ್ವಾಲಿಟಿಗೆ ಕೊಡುಗೆ

ಬೆಂಗಳೂರಿನ ವಾಯು ಗುಣಮಟ್ಟ ಇಂದು (AQI) 165ಕ್ಕೆ ಕುಸಿದಿದ್ದು, PM2.5 ಮಟ್ಟವು WHO ಸುರಕ್ಷತೆಯ ಮಿತಿಗಿಂತ 4 ಪಟ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಅದರೊಂದಿಗೆ ನಗರದಲ್ಲಿ ಹೆಚ್ಚುತ್ತಿರುವ ವಾಹನ ಸಂಖ್ಯೆಗಳಿಂದಲೂ ಏರ್ ಕ್ವಾಲಿಟಿ ಕುಸಿಯುತ್ತಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡಿದ್ದಾರೆ.

Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ವಾಹನ ಸಂಖ್ಯೆಯೂ ನೀಡುತ್ತಿದೆ ಕಳಪೆ ಏರ್ ಕ್ವಾಲಿಟಿಗೆ ಕೊಡುಗೆ
ಬೆಂಗಳೂರಿನಲ್ಲಿ ಹೆಚ್ಚಿದ ವಾಹನ ಸಂಖ್ಯೆಯೂ ನೀಡುತ್ತಿದೆ ಕಳಪೆ ಏರ್ ಕ್ವಾಲಿಟಿಗೆ ಕೊಡುಗೆ
ಭಾವನಾ ಹೆಗಡೆ
|

Updated on: Dec 26, 2025 | 8:30 AM

Share

ಬೆಂಗಳೂರು, ಡಿಸೆಂಬರ್ 26: ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹೆಚ್ಚಿನ ಏರುಪೇರಾಗಿದೆ. ಗಾಳಿಯ PM (Bengaluru Air Quality) ಪ್ರಮಾಣ ಸಹ ಮಿತಿ ಮೀರಿದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 165 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ 50ಕ್ಕಿಂತ ಹೆಚ್ಚು ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.

ವಾಹನಗಳ ಹೊಗೆಯಿಂದ ವಾಯು ಗುಣಮಟ್ಟ ಹಾಳು

ಬೆಂಗಳೂರಿನ ಇಂದಿನ ಗಾಳಿಯಲ್ಲಿ PM2.5, 82 µg/m³ ಇದ್ದು, PM10 119 µg/m³ ಇದೆ. ಇದು ವಿಶ್ವ ಆರೋಗ್ಯ ಸಂಸ್ಥೆಯ (WHO) ಸುರಕ್ಷಿತ ಮಿತಿಗಿಂತ (15) ಹೆಚ್ಚಾಗಿದೆ. PM ಎಂದರೆ ಗಾಳಿಯಲ್ಲಿರುವ ಸೂಕ್ಷ್ಮ ಕಣಗಳು. PM2.5 ಎಂದರೆ ವಾಯುವಿನಲ್ಲಿರುವ ಸಣ್ಣ ಗಾತ್ರದ ಕಣಗಳಾದರೆ, PM10 ಎಂದರೆ ಸ್ವಲ್ಪ ದೊಡ್ಡ ಗಾತ್ರದ ಕಣಗಳಾಗಿವೆ. ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ 42% ರಷ್ಟು ಕೊಡುಗೆ ನೀಡುತ್ತಿದೆ.

ಸಂಚಾರ ದಟ್ಟಣೆ ಹೆಚ್ಚಿರುವ ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಂತಹ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವು ನಗರದ ಸರಾಸರಿಗಿಂತ 30% ಹೆಚ್ಚು ದಾಖಲಾಗುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಹೀಗಿರುವಾಗ ಬಳ್ಳಾರಿಯ ಜನ ಮುಂಜಾಗೃತಾ ಕ್ರಮ ವಹಿಸಬೇಕೆಂದು ತಜ್ಞರು ತಿಳಿಸಿದ್ದಾರೆ.

ಸೂಕ್ಷ್ಮ ಕಣಗಳಿಂದಲೂ ಬರುತ್ತೆ ಅನಾರೋಗ್ಯ

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –165
  • ಮಂಗಳೂರು – 136
  • ಮೈಸೂರು – 120
  • ಬೆಳಗಾವಿ – 159
  • ಕಲಬುರ್ಗಿ – 92
  • ಶಿವಮೊಗ್ಗ – 69
  • ಬಳ್ಳಾರಿ –177
  • ಹುಬ್ಬಳ್ಳಿ- 116
  • ಉಡುಪಿ –130
  • ವಿಜಯಪುರ –105

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ