
ಬೆಂಗಳೂರು, ಮಾರ್ಚ್ 21: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಉಡುಪಿ, ಮಂಗಳೂರು ಸೇರಿ ಹಲವೆಡೆ ಏರ್ ಕ್ವಾಲಿಟಿ 150ಕ್ಕಿಂತ ಕಡಿಮೆ ಇದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.