AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರು ಸೇರಿ ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಕಂಡಿದ್ದು, ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಉಡುಪಿ ಮತ್ತು ಮಂಗಳೂರು AQI ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಬೆಂಗಳೂರು ಸೇರಿ ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ!
ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ
ಭಾವನಾ ಹೆಗಡೆ
|

Updated on:May 05, 2026 | 8:07 AM

Share

ಬೆಂಗಳೂರು, ಮೇ 05: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಕೇವಲ 98ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಹುಬ್ಬಳ್ಳಿ ಏರ್ ಕ್ವಾಲಿಟಿ ಇಂದು 52ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 98
  • ಮಂಗಳೂರು-124
  • ಮೈಸೂರು – 84
  • ಬೆಳಗಾವಿ – 42
  • ಕಲಬುರ್ಗಿ-90
  • ಶಿವಮೊಗ್ಗ –94
  • ಬಳ್ಳಾರಿ – 96
  • ಹುಬ್ಬಳ್ಳಿ- 58
  • ಉಡುಪಿ –102
  • ವಿಜಯಪುರ – 99

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Tue, 5 May 26

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!