AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ!

ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ!
ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ!
ಭಾವನಾ ಹೆಗಡೆ
|

Updated on: Feb 16, 2026 | 8:15 AM

Share

ಬೆಂಗಳೂರು, ಫೆಬ್ರವರಿ 16: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality)ಇಂದು ಕಳಪೆ ಮಟ್ಟ ತಲುಪಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಅನಾರೋಗ್ಯಕರ ವಾಯು ಗುಣಮಟ್ಟವಿದ್ದು, ಇಂದಿನ ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರನ್ನೂ ಮೀರಿಸಿದೆ. 200ರ ಗಡಿ ತಲುಪಿರುವ ಶಿವಮೊಗ್ಗದ AQI, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 198 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 179 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –172
  • ಮಂಗಳೂರು-176
  • ಮೈಸೂರು –176
  • ಬೆಳಗಾವಿ – 169
  • ಕಲಬುರ್ಗಿ-136
  • ಶಿವಮೊಗ್ಗ – 198
  • ಬಳ್ಳಾರಿ – 179
  • ಹುಬ್ಬಳ್ಳಿ- 153
  • ಉಡುಪಿ –173
  • ವಿಜಯಪುರ –150

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ