AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ

ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಉಡುಪಿಯಲ್ಲಿಯೂ AQI ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ
ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ
ಭಾವನಾ ಹೆಗಡೆ
|

Updated on: Feb 17, 2026 | 8:23 AM

Share

ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 175ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಉಡುಪಿಯ ಏರ್ ಕ್ವಾಲಿಟಿ 181 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 178 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –175
  • ಮಂಗಳೂರು-174
  • ಮೈಸೂರು –177
  • ಬೆಳಗಾವಿ – 178
  • ಕಲಬುರ್ಗಿ-146
  • ಶಿವಮೊಗ್ಗ – 174
  • ಬಳ್ಳಾರಿ – 178
  • ಹುಬ್ಬಳ್ಳಿ- 153
  • ಉಡುಪಿ –181
  • ವಿಜಯಪುರ –144

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?