ಬೆಂಗಳೂರು ಗಾಳಿಯ ಗುಣಮಟ್ಟ ತೀವ್ರ ಕುಸಿತ: ಉಸಿರಾಟ ಸಂಬಂಧಿ ಸಮಸ್ಯೆ ಹೆಚ್ಚಳದ ಆತಂಕ
ಬೆಂಗಳೂರಿನಲ್ಲಿ ವಾಯುಮಾಲಿನ್ಯದ ಮಟ್ಟ ಗಂಭೀರವಾಗಿದ್ದು, ಗಾಳಿಯ ಗುಣಮಟ್ಟ ಸೂಚ್ಯಂಕ (AQI) 180ಕ್ಕೆ ತಲುಪಿದೆ. ವಾಹನ ದಟ್ಟಣೆ, ನಿರ್ಮಾಣ ಕಾರ್ಯಗಳು ಮತ್ತು ಚಳಿಗಾಲ ಇದಕ್ಕೆ ಪ್ರಮುಖ ಕಾರಣ. ಇದರಿಂದ ಉಸಿರಾಟದ ತೊಂದರೆಗಳುಂಟಾಗಬಹುದು. ಮುಂದಿನ ಕೆಲವು ದಿನಗಳವರೆಗೆ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಸಾರ್ವಜನಿಕರು ಮಾಸ್ಕ್ ಧರಿಸಿ, ಹೊರಗೆ ಹೋಗುವುದನ್ನು ತಪ್ಪಿಸಿ ಎಚ್ಚರ ವಹಿಸಬೇಕು ಎಂದು ಹೇಳಲಾಗಿದೆ.

ಬೆಂಗಳೂರು, ಡಿ.11: ಬೆಂಗಳೂರಿನಲ್ಲಿ ಮೂರು ದಿನದಿಂದ ಗಾಳಿಯ ಗುಣಮಟ್ಟದಲ್ಲಿ (Bangalore Air Quality Alert) ವ್ಯತ್ಯಾಸ ಕಂಡು ಬಂದಿದೆ, ಬೆಂಗಳೂರಿನ ನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚಿದೆ. ಗಾಳಿಯ ಗುಣಮಟ್ಟ ಅನಾರೋಗ್ಯಕರವಾಗಿದ್ದು 180ಕ್ಕೆ ತಲುಪಿದೆ. ಇದರಿಂದ ಇದೀಗ ಜನರು ಆತಂಕ ಪಡುವಂತಾಗಿದೆ. ಬೆಂಗಳೂರಿನ ಗಾಳಿಯಲ್ಲಿ ಉಂಟಾದ ಅಶುದ್ಧತೆಯಿಂದ ಉಸಿರಾಟ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಇದಕ್ಕೆ ಪ್ರಮುಖ ಚಳಿಗಾಲ ಎಂದು ಹೇಳಲಾಗಿದೆ. ಇದರ ಜತೆಗೆ ವಾಹನ ದಟ್ಟಣೆ ಮತ್ತು ನಿರ್ಮಾಣ ಕಾರ್ಯಗಳಿಂದ ಈ ಸ್ಥಿತಿ ಉಂಟಾಗಿದೆ ಎಂದು ಹೇಳಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ಇದು ಅನಾರೋಗ್ಯ ಪೀಡಿತರ ಮೇಲೆ ಹಾಗೂ ಯುವಕರು, ಮಕ್ಕಳ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡಬಹುದು. ಅದಕ್ಕಾಗಿ ಹೆಚ್ಚು ಹೊರಗಡೆ ಹೋಗುವುದನ್ನು ತಪ್ಪಿಸುವುದೇ ಇದಕ್ಕೆ ಉತ್ತಮ ಪರಿಹಾರ ಹಾಗೂ ಬಿಸಿ ತೇವಾಂಶ ಇರುವ ವಸ್ತುಗಳನ್ನು ಬಳಸುವುದು ಉತ್ತಮ ಎಂದು ಹೇಳಲಾಗಿದೆ. ದೆಹಲಿಗಿಂತ ಬೆಂಗಳೂರಿನ ವಾತಾವರಣ ಉತ್ತಮವಾಗಿದ್ದರೂ, ಸೂಚ್ಯಂಕದ ಪ್ರಕಾರ ಇದು ಕಳಪೆ ಗಾಳಿಯಾಗಿರುವ ಕಾರಣ ಎಚ್ಚರ ವಹಿಸುವುದು ಅಗತ್ಯ.
ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ 90-180ಕ್ಕೆ ತಲುಪಿದೆ. ಇದು ಅನಾರೋಗ್ಯಕರ ಸ್ಥಿತಿ ಎಂದು ಹೇಳಲಾಗಿದೆ. PM2.5 (ಸೂಕ್ಷ್ಮ ಕಣಗಳು) ಮತ್ತು PM10 ಪ್ರಮುಖವಾಗಿವೆ, ಜೊತೆಗೆ ಸಾರಜನಕ ಡೈಆಕ್ಸೈಡ್ ಗಾಳಿಯ ಮಟ್ಟವನ್ನು ಕುಗ್ಗಿಸಿದೆ. ವಾಹನಗಳಿಂದ ಹೊರಸೂಸುವ ಹೊಗೆ ಮತ್ತು ನಡೆಯುತ್ತಿರುವ ನಿರ್ಮಾಣ ಕಾರ್ಯಗಳಿಂದ ಗಾಳಿಯ ಗುಣಮಟ್ಟದ ಹದಗೆಡಲು ಕಾರಣ ಎಂದು ಹೇಳಲಾಗಿದೆ. ಇದರ ಜತೆಗೆ ಚಳಿಗಾಲ ಆಗಿರುವ ಕಾರಣ ಈ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಇದರಿಂದ ಉಸಿರಾಟದ ತೊಂದರೆ ಮತ್ತು ಗಂಟಲಿನ ಕಿರಿಕಿರಿಯನ್ನು ಉಂಟುಮಾಡಬಹುದು, ವಿಶೇಷವಾಗಿ ಯುವಕರು, ವೃದ್ಧರಲ್ಲಿ ಉಸಿರಾಟದ ಸಮಸ್ಯೆ ಕಂಡು ಬರಬಹುದು. ಇನ್ನು ಇಂತಹ ಗಾಳಿಯ ಗುಣಮಟ್ಟದಿಂದ ಯುವಕರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ವರದಿಗಳು ಹೇಳಿದೆ.
ಮುಂದಿನ 4 ದಿನ ಗಾಳಿಯ ಗುಣಮಟ್ಟ:
ಇಂದು ಗಾಳಿಯ ಗುಣಮಟ್ಟ 180ಕ್ಕೆ ತಲುಪಿದೆ. ಇದು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಹೆಚ್ಚು ಅಪಾಯಕಾರಿ ಗಾಳಿಯ ಮಟ್ಟದ ಎಂದು ಹೇಳಲಾಗಿದೆ. ನಾಳೆ (ಡಿ.12) ಗಾಳಿಯ ಗುಣಮಟ್ಟ 156ಕ್ಕಿಂತ ಹೆಚ್ಚಿರಬಹುದು. ಇದರಿಂದ ಕೂಡ ಆರೋಗ್ಯದ ಮೇಲೆ ಪರಿಣಾಮ ಉಂಟಾಗಬಹುದು. ಆರೋಗ್ಯವಂತ ವ್ಯಕ್ತಿಗಳು ಉಸಿರಾಟದ ತೊಂದರೆ ಮತ್ತು ಗಂಟಲಿನ ಕಿರಿಕಿರಿಯನ್ನು ಅನುಭವಿಸುವ ಸಾಧ್ಯತೆಯಿದೆ. ಶನಿವಾರ (ಡಿ.13) ಗಾಳಿಯ ಗುಣಮಟ್ಟ 157ಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರಿಂದಲ್ಲೂ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಉಂಟು ಮಾಡುಬಹುದು. ಇನ್ನು ಭಾನುವಾರ (ಡಿ.14) ಗಾಳಿಯ ಗುಣಮಟ್ಟ 171ಕ್ಕೆ ತಲುಪಲಿದೆ ಎಂದು ಹೇಳಲಾಗಿದೆ. ಜನರು ಈ ಮೂರು ದಿನವೂ ಎಚ್ಚರಿಕೆಯಿಂದ ಇರಬೇಕು ಹಾಗೂ ಆರೋಗ್ಯದ ಬಗ್ಗೆ ಗಮನ ನೀಡಬೇಕು ಎಂದು ಹೇಳಲಾಗಿದೆ.
ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ
ಈ ಮಾಲಿನ್ಯಕ್ಕೆ ಪ್ರಮುಖ ಕಾರಣ:
ಅತಿ ಹೆಚ್ಚು ವಾಹನ ದಟ್ಟಣೆಯಿಂದ ಈ ಸಮಸ್ಯೆ ಉಂಟಾಗಿದೆ. ಇಂಧನ ದಹನದಿಂದ ಹೊರಸೂಸುವ ಗಾಳಿಯಿಂದ ಮಾಲಿನ್ಯಕಾರಕಕ್ಕೆ ಕಾರಣವಾಗಿದೆ. ರಸ್ತೆ ಕಾಮಗಾರಿ, ಕಟ್ಟಡ ಕಾಮಗಾರಿಗಳಿಂದಲ್ಲೂ ಪರಿಸರ ಮಾಲಿನ್ಯ ಉಂಟಾಗಿದೆ. ಜತೆಗೆ ತ್ಯಾಜ್ಯ ಸುಡುವುದರಿಂದ ಈ ಸಮಸ್ಯೆ ಉಂಟಾಗಿದೆ. ಹೊರಗೆ ಹೋಗಬೇಕಾದರೆ ಮಾಸ್ಕ್ಗಳನ್ನು ಧರಿಸುವುದು ಉತ್ತಮ, ಹೆಚ್ಚಾಗಿ ಬಿಸಿ ಆಹಾರಗಳನ್ನು ಸೇವನೆ ಮಾಡುವುದು ಉತ್ತಮ.
ಉತ್ತರ ಕರ್ನಾಟಕ ಗಾಳಿಮಟ್ಟದಲ್ಲಿ ವ್ಯತ್ಯಾಸ:
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಿದ್ದು, ಸಸ್ಯಗಳಲ್ಲಿ ಶಿಲೀಂಧ್ರ ರೋಗಗಳನ್ನು ಪ್ರಚೋದಿಸುವುದರ ಜೊತೆಗೆ ಜನರಿಗೆ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಸೇರಿದಂತೆ ಹೆಚ್ಚಿನ ಭಾಗಗಳಲ್ಲಿ ಜನರು ರಾತ್ರಿಯಲ್ಲಿ ಕೊರೆಯುವ ಚಳಿಯಿಂದಾಗಿ ಮನೆಯಿಂದ ಹೊರಗೆಯೇ ಬಂದಿಲ್ಲ.
ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




