ಏರ್ ಶೋ: ಪೊಲೀಸರಿಗಿನ್ನು ಇಸ್ಕಾನ್ ಆಹಾರ, ಜಿರಳೆ ಹುಳ ಪತ್ತೆ ಬೆನ್ನಲ್ಲೇ ಖಾಸಗಿ ಕಂಪನಿ ಗುತ್ತಿಗೆ ರದ್ದು

ಏರ್ ಶೋ ರಿಹರ್ಸಲ್ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿತ್ತು. ಆನಂತರ, ಇದೀಗ ಆಹಾರದಲ್ಲಿ ಹುಳ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಖಾಸಗಿ ಸಂಸ್ಥೆಯ ಗುತ್ತಿಗೆಯನ್ನು ಸರ್ಕಾರ ರದ್ದುಪಡಿಸಿದ್ದು, ಭದ್ರತೆಗೆ ನಿಯೋಜನೆಯಾಗಿರುವ ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇಸ್ಕಾನ್ ಸಂಸ್ಥೆಗೆ ವಹಿಸಿದೆ.

ಏರ್ ಶೋ: ಪೊಲೀಸರಿಗಿನ್ನು ಇಸ್ಕಾನ್ ಆಹಾರ, ಜಿರಳೆ ಹುಳ ಪತ್ತೆ ಬೆನ್ನಲ್ಲೇ ಖಾಸಗಿ ಕಂಪನಿ ಗುತ್ತಿಗೆ ರದ್ದು
ಏರ್ ಶೋ

Updated on: Feb 11, 2025 | 8:15 AM

ಬೆಂಗಳೂರು, ಫೆಬ್ರವರಿ 11: ಏರೋ ಇಂಡಿಯಾ 2025ರ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇದೀಗ ಸರ್ಕಾರ ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಏರ್ ಶೋ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆ ಆಗುತ್ತಿರುವ ಪ್ರಕರಣ ಮರುಕಳಿಸಿದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.

ಖಾಸಗಿ ಕಂಪನಿ ಗುತ್ತಿಗೆ ರದ್ದು

ಏರ್ ಶೋ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಸೋಮವಾರ ನೀಡಿದ್ದ ಆಹಾರದಲ್ಲಿ ಹುಳ ಪತ್ತೆಯಾಗಿತ್ತು. ಈ ವಿಚಾರವಾಗಿ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಆಹಾರ ಪೂರೈಕೆಗೆ ಖಾಸಗಿ ಸಂಸ್ಥೆಗೆ ನೀಡಿದ್ದ ಗುತ್ತಿಗೆಯನ್ನು ಸರ್ಕಾರ ರದ್ದುಪಡಿಸಿದೆ.

ಆಹಾರದಲ್ಲಿ ಜಿರಳೆ, ಹುಳ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಪೊಲೀಸರಿಗೆ ಆಹಾರ ಒದಗಿಸುವ ಗುತ್ತಿಗೆಯನ್ನು ಎಂಬ ಖಾಸಗಿ ಕಂಪನಿಯೊಂದಕ್ಕೆ ವಹಿಸಲಾಗಿತ್ತು. ಈ ಕಂಪನಿ ಪೂರೈಸಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆಯಾಗಿದ್ದವು. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಆಡಳಿತಕ್ಕೆ ಇರಿಸುಮುರಿಸು ಆಗಿದ್ದಲ್ಲದೆ, ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ವಿಜೆ ಸಜಿತ್ ಹೇಳಿದ್ದು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಏರೋ ಶೋ ರಿಹರ್ಸಲ್‌ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ

ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಆಹಾರದಲ್ಲಿ ಜಿರಳೆ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ, ಗುಣಮಟ್ಟದ ಆಹಾರ ನೀಡಲು ಕಮಿಷನರ್ ಸೂಚನೆ ನೀಡಿದ್ದರು. ಆದಾಗ್ಯೂ ಸೋಮವಾರ ಊಟದ ಜತೆ ನೀಡಿದ್ದ ಸಿಹಿ ತಿನಿಸಿನಲ್ಲಿ ಹುಳ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸ್ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ

ಏಷ್ಯಾದ ಅತಿದೊಡ್ಡ ಏರ್ ಶೋ ಸೋಮವಾರ ಆರಂಭವಾಗಿದೆ. ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ಮೊದಲ ಮೂರು ದಿನಗಳು ಉದ್ಯಮಕ್ಕೆ ಸಂಬಂಧಿಸಿದಾಗಿರುತ್ತವೆ. ಕೊನೆಯ ಎರಡು ದಿನಗಳು ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ