AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲರ್ಜಿ ನಗರವಾದ ಬೆಂಗಳೂರು: ರಸ್ತೆ ಕಾಮಗಾರಿ ಧೂಳು, ವಾಯುಮಾಲಿನ್ಯದಿಂದ ಜನ ಹೈರಾಣ

ಗಾರ್ಡನ್ ಸಿಟಿ ಬೆಂಗಳೂರು ಸದ್ಯ ಪೊಲ್ಯೂಷನ್ ಸಿಟಿಯಾಗುತ್ತಿದೆ. ಕಾಂಕ್ರಿಟ್ ರಸ್ತೆಗಳ ಮಧ್ಯೆ ಈಗ ಎಲ್ಲೆಡೆ ಕಾಮಗಾರಿಗಳ ಧೂಳು, ವಾಯುಮಾಲಿನ್ಯ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಜನರಲ್ಲಿ ಅಲರ್ಜಿ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅಲರ್ಜಿ ಕೆಮ್ಮು, ಸೀನು ಹಾಗೂ ಇತರ ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಅಲರ್ಜಿ ನಗರವಾದ ಬೆಂಗಳೂರು: ರಸ್ತೆ ಕಾಮಗಾರಿ ಧೂಳು, ವಾಯುಮಾಲಿನ್ಯದಿಂದ ಜನ ಹೈರಾಣ
ಧೂಳುಮಯ ರಸ್ತೆ
Follow us
Vinay Kashappanavar
| Updated By: Ganapathi Sharma

Updated on: Apr 14, 2025 | 9:32 AM

ಬೆಂಗಳೂರು, ಏಪ್ರಿಲ್ 14: ಬೇಸಿಗೆಯ ತಾಪಮಾನ, ವೈಟ್ ಟಾಪಿಂಗ್ ಸೇರಿದಂತೆ ಹಲವು ಕಾಮಗಾರಿಗಳಿಂದಾಗಿ (BBMP Works) ಬೆಂಗಳೂರಿನ (Bengaluru) ಬಹುತೇಕ ರಸ್ತೆಗಳು ಧೂಳಿನಿಂದ ಹದಗೆಡುತ್ತಿವೆ. ವಾಯುಮಾಲಿನ್ಯದಿಂದ (Air Pollution) ಸಾರ್ವಜನಿಕರಿಗೆ ಅನಾರೋಗ್ಯದ ಭೀತಿ ಎದುರಾಗಿದೆ. ರಾಜಾಜಿನಗರ, ನಂದಿನಿ ಲೇಔಟ್, ಬಸವೇಶ್ವರ ನಗರದ ಪ್ರಮುಖ ರಸ್ತೆಗಳು ಧೂಳಿನಿಂದ ಕೂಡಿದ್ದು, ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಅನಾರೋಗ್ಯದ ಭೀತಿಯಲ್ಲಿ ಮಾಸ್ಕ್ ಧಿರಸಿಕೊಂಡೇ ಸಂಚರಿಸುತ್ತಿದ್ದಾರೆ. ಸದ್ಯ ಸಿಲಿಕಾನ್ ಸಿಟಿ ಅಲರ್ಜಿಕ್ ಸಿಟಿಯಾಗಿ ಪರಿಣಮಿಸಿದೆ. ಮಳೆಗಾಲದಲ್ಲಿ ಹೆಚ್ಚಾಗುತ್ತಿದ್ದ ಅಲರ್ಜಿ ಸಮಸ್ಯೆಗಳು ಈಗ ಬೇಸಿಗೆಯಲ್ಲಿಯೇ ಶುರುವಾಗಿವೆ.

ರಾಜಧಾನಿಯಲ್ಲಿ ಹೆಚ್ಚಾಗಿರುವ ಧೂಳು ಹಾಗೂ ಹವಾಮಾನ ಬದಲಾವಣೆಯಿಂದ ನೆಗಡಿ ಮತ್ತು ಕೆಮ್ಮಿನ ಜೊತೆಗೆ ಅಲರ್ಜಿ ಬೆಂಬಿಡದೇ ಕಾಡುತ್ತಿದೆ. ಬೆಂಗಳೂರಿನ ಬಹುತೇಕ ಕಡೆ ರಸ್ತೆ ಅಗೆದು ತಿಂಗಳುಗಟ್ಟಲೆ ಹಾಗೇ ಬಿಟ್ಟಿರುವುದರಿಂದ ಧೂಳು ಹೆಚ್ಚಾಗಿದೆ. ಜೊತೆಗೆ ಬದಲಾಗುತ್ತಿರುವ ಹವಮಾನ ಕೂಡ ಕೊಡುಗೆ ನೀಡುತ್ತಿದೆ. ಧೂಳಿನ ಪ್ರಮಾಣ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ಅಲರ್ಜಿ ಪ್ರಕರಣಗಳು ಹೆಚ್ಚಾಗಿವೆ. ಅರ್ಲಜಿ ಕೆಮ್ಮು, ನೆಗಡಿ ಎಂದು ಸರ್ಕಾರಿ ಆಸ್ಪತ್ರೆಗಳಿಗೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ.

Bengaluru Govt Hospital

ಸೀನು, ಕೆಮ್ಮು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಳ

ಜ್ವರ, ನೆಗಡಿ ಮತ್ತು ಕೆಮ್ಮಿನ ಜೊತೆಗೆ ಜನರನ್ನು ಅಲರ್ಜಿಯೂ ಕಾಡುತ್ತಿದೆ. ಆಸ್ಪತ್ರೆಗಳಿಗೆ ಬರುವ ಬಹುತೇಕ ಮಕ್ಕಳಲ್ಲಿಯೂ ಈ ಸಮಸ್ಯೆ ಕಂಡು ಬರುತ್ತಿದೆ. ಬೇಸಿಗೆ ಜೊತೆಗೆ ಮಳೆ ಕಾಟ ಇರುವುದರಿಂದ ಅಲರ್ಜಿ ಹೆಚ್ಚಾಗುತ್ತಿದ್ದು ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ನಿಗಾವಹಿಸಬೇಕು ಎಂದು ಕೆಸಿ ಜನರಲ್ ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ಡಾ ಶುಭಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
ಯಾದಗಿರಿ: ತಾಪಮಾನ ಏರಿಕೆ ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು ಹೆಚ್ಚಳ
Image
ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ, ಅಗತ್ಯ ವಸ್ತುಗಳಿಗೆ ತಟ್ಟಲಿದೆ ಬಿಸಿ
Image
ಅದ್ಧೂರಿಯಾಗಿ ನೆರವೇರಿದ ಬೆಂಗಳೂರು ಕರಗ ಶಕ್ತ್ಯೋತ್ಸವ: ಸಿಎಂ, ಡಿಸಿಎಂ ಭಾಗಿ
Image
ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವು: ಇಂದೇ ಆರ್ಡರ್​ ಮಾಡಿ

ಯಾವೆಲ್ಲ ಸಮಸ್ಯೆಗಳು, ಯಾವ ಪ್ರದೇಶಗಳಲ್ಲಿ ಹೆಚ್ಚಳ?

ಧೂಳಿನಿಂದ ಕೆಮ್ಮು, ಕಣ್ಣು ಉರಿ, ಅಸ್ತಮಾ, ಉಸಿರಾಟ, ಚರ್ಮರೋಗ, ಶ್ವಾಸಕೋಶ ತೊಂದರೆ, ಮಕ್ಕಳಿಗೆ ಉಸಿರಾಟದ ಸಮಸ್ಯೆ ಕಂಡು ಬರುತ್ತಿವೆ. ರಾಜಾಜಿನಗರ, ಮಲ್ಲೇಶ್ವರಂ ಹಾಗೂ ಬಶವೇಶ್ವರನಗರದ ಪ್ರಮುಖ ರಸ್ತೆಗಳು ಹಳ್ಳ ಹಿಡದಿದ್ದು, ಧೂಳುಮಯವಾಗಿವೆ. ಜಲಮಂಡಳಿ, ಬಿಬಿಎಂಪಿ ಹಾಗೂ ಬೆಸ್ಕಾಂ ಒಂದೇ ಸಮುದಲ್ಲಿ ಎಲ್ಲಡೆ ನಡೆಸುತ್ತಿರುವ ಕಾಮಗಾರಿಯೇ ಇದಕ್ಕೆಲ್ಲ ಕಾರಣ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಯಾದಗಿರಿ: ತಾಪಮಾನ ಏರಿಕೆ ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು, ಆರೋಗ್ಯ ಸಮಸ್ಯೆ ಹೆಚ್ಚಳ

ಒಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇದೀಗ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರ ಜನರಿಗೆ ಅನುಕೂಲ ಆಗುವುದಕ್ಕೆಂದು ಏನು ಮಾಡಲು ಹೊರಟಿದೆಯೋ ಆ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಮಾಡಿ ಮುಗಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ