ಕಗ್ಗತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ; ಎರಡು ದಿನಗಳಿಂದ ನೋ ಕರೆಂಟ್, ರೋಗಿಗಳ ಪರದಾಟ

ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್​ ಸಮಸ್ಯೆಯಿಂದಾಗಿ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು ಆಸ್ಪತ್ರೆ ಮುಂಭಾಗ ವೈಯರ್​ ಕಟ್ ಆಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಗ್ಗತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ; ಎರಡು ದಿನಗಳಿಂದ ನೋ ಕರೆಂಟ್, ರೋಗಿಗಳ ಪರದಾಟ
ಬೌರಿಂಗ್ ಆಸ್ಪತ್ರೆ
Follow us
TV9 Web
| Updated By: ಆಯೇಷಾ ಬಾನು

Updated on:Feb 06, 2023 | 11:37 AM

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಕಳೆದ 2 ದಿನಗಳಿಂದ ಕರೆಂಟ್ ಕಟ್ ಆಗಿದ್ದು ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಶಿವಾಜಿನಗರದ ಬ್ರಿಟಿಷರ ಕಾಲದ ಲೇಡಿ ಕರ್ಜನ್ ರಸ್ತೆಯ ಬೌರಿಂಗ್ ಆಸ್ಪತ್ರೆ ಕರೆಂಟ್ ಇಲ್ಲದೆ ಕಗ್ಗತ್ತಲಲ್ಲಿ ಮುಳುಗಿದೆ. ಸರ್ಕಾರ, ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಬಡ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೌರಿಂಗ್ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಆಗಮಿಸುತ್ತಾರೆ. ನಿತ್ಯ ಹತ್ತಾರು ಗರ್ಭಿಣಿಯರು ಹೆರಿಗೆಗಾಗಿ ಇದೇ ಆಸ್ಪತ್ರೆ ಮೇಲೆ ಅವಲಂಬಿತರಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್​ ಸಮಸ್ಯೆಯಿಂದಾಗಿ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು ಆಸ್ಪತ್ರೆ ಮುಂಭಾಗ ವೈಯರ್​ ಕಟ್ ಆಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಂದ ವಿದ್ಯುತ್​ ಬಿಲ್​ ಬಾಕಿ: ಅನುದಾನ ಕೋರಿ ಆರೋಗ್ಯ ಇಲಾಖೆ ಮುಖ್ಯ ಲೆಕ್ಕಾಧಿಕಾರಿಗೆ ಪತ್ರ

ಲಕ್ಷ ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರಿ ಆಸ್ಪತ್ರೆಗಳು

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಕಾಲಮಿತಿಯಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡದೆ ಇದ್ದರೆ, ವಿದ್ಯುತ್‌ ಕಡಿತ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಹಾಗೂ ಜಯನಗರದ ಆಸ್ಪತ್ರೆ 24,49,453 ರೂ. ಬಾಕಿ ಉಳಿಸಿಕೊಂಡಿದ್ದು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸ್ಥಗಿತಗೊಳಿಸುಂತೆ ಬೆಸ್ಕಾಂ ಎಚ್ಚರಿಕೆ ನೀಡಿದೆ.

ಲೈಟ್, ಫ್ಯಾನ್, ಎಜಿಯ ಜೊತೆಗೆ ಆಕ್ಸಿಜನ್ ಘಟಕ, ವೆಂಟಿಲೇಟರ್, ಆಪರೇಷನ್ ಥಿಯೇಟರ್, ಲಿಫ್ಟ್ ಸೇರಿದಂತೆ ಇತರೆ ಬಳಕೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ಬಿಲ್ ಹಾಗೆ ಬಾಕಿ ಉಳಿದಿದೆ. ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುತ್ತಾರೆ. ಇಂತಹ ಸನ್ನಿವೇಶದಲ್ಲಿ ವಿದ್ಯುತ್ ಬಳಕೆ ಹೆಚ್ಚಳ ಸರ್ವೇ ಸಾಮಾನ್ಯವಾಗಿರುತ್ತೆ. ವಿದ್ಯುತ್ ಬಿಲ್ ಬಾಕಿ ಇರುವ ಪರಿಣಾಮ ಸರ್ಕಾರಕ್ಕೆ 40 ಲಕ್ಷ ಬಿಡುಗಡೆ ಕೋರಿ ಪತ್ರ ಬರೆಯಲಾಗಿದೆ‌. ಖಜಾನೆಯಿಂದ ಹಣ ಬಿಡುಗಡೆಯಾದ ಬಳಿಕ ಕೂಡಲೇ ಬಾಕಿ ವಿದ್ಯುತ್ ಬಿಲ್ ಪಾವತಿಗೊಳಿಸುವುದಾಗಿ ಜಯನಗರ ಸಾರ್ವಜನಿಕ ಆಸ್ಪತ್ರೆಯ ವೈಧ್ಯಾಧಿಕಾರಿ ರಾಮಕೃಷ್ಣ ತಿಳಿಸಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Mon, 6 February 23

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ