AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಕ್ಷಿತ ಬೆಂಗಳೂರಿಗೆ ಬಿಟಿಪಿ ಹೊಸ ಹೆಜ್ಜೆ: ಅನಾಥ ವಾಹನಗಳ ಬಗ್ಗೆ ದೂರು ನೀಡಲು ಈ ಆಪ್ ಬಳಸಿ

ಬೆಂಗಳೂರು ಸಂಚಾರ ಪೊಲೀಸ್ (BTP) ನಗರದ ರಸ್ತೆಗಳು ಹಾಗೂ ಕಾಲುದಾರಿಗಳನ್ನು ಹೆಚ್ಚು ಸುರಕ್ಷಿತವಾಗಿಸಲು ಅನಾಥ ವಾಹನ ತೆರವು ಕಾರ್ಯಾಚರಣೆ ತೀವ್ರಗೊಳಿಸಿದೆ. ಸಾರ್ವಜನಿಕರು BTP ASTraM ಮೊಬೈಲ್ ಆ್ಯಪ್ ಮೂಲಕ ಅಂತಹ ವಾಹನಗಳ ಬಗ್ಗೆ ಮಾಹಿತಿ ನೀಡಿ ಅಭಿಯಾನದಲ್ಲಿ ಭಾಗವಹಿಸಬಹುದು. ಇದುವರೆಗೆ 1,286 ವಾಹನಗಳಿಗೆ ನೋಟಿಸ್ ಅಂಟಿಸಿ, 172 ವಾಹನಗಳನ್ನು ತೆರವುಗೊಳಿಸಲಾಗಿದೆ. ನಾಗರಿಕರ ಸಹಭಾಗಿತ್ವದಿಂದ ಸಂಚಾರ ಸುಗಮವಾಗಲಿದೆ.

ಸುರಕ್ಷಿತ ಬೆಂಗಳೂರಿಗೆ ಬಿಟಿಪಿ ಹೊಸ ಹೆಜ್ಜೆ: ಅನಾಥ ವಾಹನಗಳ ಬಗ್ಗೆ ದೂರು ನೀಡಲು ಈ ಆಪ್ ಬಳಸಿ
ASTraM ಆ್ಯಪ್ ಬೆಂಗಳೂರು
ಅಕ್ಷಯ್​ ಪಲ್ಲಮಜಲು​​
|

Updated on:Jul 28, 2026 | 8:27 PM

Share

ಬೆಂಗಳೂರು, ಜು.28: ಬೆಂಗಳೂರು ನಗರದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟುಮಾಡುತ್ತಿರುವ ಅನಾಥ ವಾಹನಗಳನ್ನು (Abandoned Vehicles) ತೆರವುಗೊಳಿಸುವ ವಿಶೇಷ ಅಭಿಯಾನವನ್ನು ಬೆಂಗಳೂರು ಸಂಚಾರ ಪೊಲೀಸ್ (BTP) ತೀವ್ರಗೊಳಿಸಿದೆ. ಈ ಬಗ್ಗೆ ಬೆಂಗಳೂರು ಅಭಿವೃದ್ಧಿ (ನಗರಾಭಿವೃದ್ಧಿ) ಸಚಿವರು ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರಿಗೆ ತಮ್ಮ ಅಭಿಯಾನದಲ್ಲಿ ಭಾಗಿಯಾಗುವಂತೆ ಕೇಳಿಕೊಂಡಿದ್ದಾರೆ. ಸುರಕ್ಷಿತ ಹಾಗೂ ಉತ್ತಮ ನಗರಕ್ಕಾಗಿ ಈ ಕಾರ್ಯದಲ್ಲಿ ಭಾಗುವಹಿಸುವಂತೆ ಕೇಳಿಕೊಂಡಿದ್ದಾರೆ.

ನಗರದ ರಸ್ತೆಗಳು ಹಾಗೂ ಕಾಲುದಾರಿಗಳನ್ನು ಹೆಚ್ಚು ಸುರಕ್ಷಿತ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಸಾರ್ವಜನಿಕರು ಕೂಡ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು BTP ASTraM ಮೊಬೈಲ್ ಆ್ಯಪ್ ಮೂಲಕ ಮಾಹಿತಿ ನೀಡಲು ಕೋರಲಾಗಿದೆ.

ಇದನ್ನೂ ಓದಿ:  ಅತ್ತೆ ವಿರುದ್ಧ ಖುದ್ದು ವಾದ ಮಂಡಿಸಿದ ಸೊಸೆ: ದೋಸೆ ಅಕ್ಕಿ ಅನ್ನ, ಡೌ ಶ್ಯಾಂಪೂ ಒತ್ತಾಯ 498A ಅಡಿ ಕ್ರೌರ್ಯವೇ?; ಹೈಕೋರ್ಟ್ ತೀವ್ರ ಪ್ರಶ್ನೆ

ಬೆಂಗಳೂರು ಸಂಚಾರ ಪೊಲೀಸರು ಪ್ರಕಟಿಸಿರುವ ಅಧಿಕೃತ ದತ್ತಾಂಶದ ಪ್ರಕಾರ, ಇದುವರೆಗೆ ನಗರದಾದ್ಯಂತ ಕೈಗೊಂಡ ಕ್ರಮಗಳ ವಿವರ ಹೀಗಿದೆ:

ನೋಟಿಸ್ ಅಂಟಿಸಲಾದ ಅನಾಥ ವಾಹನಗಳು: 1,286

ಟೋಯಿಂಗ್ (ತೆರವು) ಮಾಡಲಾದ ವಾಹನಗಳು: 172

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​​:

ವಲಯವಾರು ಕೈಗೊಂಡ ಕ್ರಮಗಳ ವಿವರ:

ವಲಯ (Zone) ನೋಟಿಸ್ ಅಂಟಿಸಿದ ವಾಹನಗಳು ಟೋಯಿಂಗ್ ಮಾಡಲಾದ ವಾಹನಗಳು  
ಸೆಂಟ್ರಲ್ (Central) 537 48  
ಪಶ್ಚಿಮ (West) 311 54  
ದಕ್ಷಿಣ (South) 247 34  
ಉತ್ತರ (North) 123 30  
ಪೂರ್ವ (East) 68 6  
ಒಟ್ಟು (Total) 1286 172  

ನಿಮ್ಮ ಬಡಾವಣೆ, ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಲವು ದಿನಗಳಿಂದ ಬಳಕೆಯಾಗದೆ ಧೂಳು ಹಿಡಿದು ಬಿದ್ದಿರುವ ಅನಾಥ ವಾಹನಗಳು ಕಂಡುಬಂದರೆ, ಸಾರ್ವಜನಿಕರು ತಕ್ಷಣವೇ ‘BTP ASTraM App’ ಡೌನ್‌ಲೋಡ್ ಮಾಡಿಕೊಂಡು, ವಾಹನದ ಫೋಟೋ ಹಾಗೂ ಸ್ಥಳದ ವಿವರದೊಂದಿಗೆ ದೂರು ನೀಡಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Tue, 28 July 26

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ