ಬೆಂಗಳೂರು ಎಂಎಎಲ್ಸಿ ಚುನಾವಣೆ: 15 ಸದಸ್ಯರ ಮತದಾನಕ್ಕೆ ಹೈ ಅನುಮತಿ, ಆದರೆ ಫಲಿತಾಂಶಕ್ಕೆ ಕೋರ್ಟ್ ಅನುಮತಿ ಕಡ್ಡಾಯ
ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ರಿಟ್ ಅರ್ಜಿ ಸಲ್ಲಿಸಿ, ಆನೇಕಲ್, ಅತ್ತಿಬೆಲೆ ಮತ್ತು ಮಹದೇವಪುರ ಪುರಸಭೆಯ 15 ನಾಮನಿರ್ದೇಶಿತ ಸದಸ್ಯರ ಮತದಾನ ಪ್ರಶ್ನಿಸಿದ್ದರು.
ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಎಂಎಎಲ್ಸಿ ಚುನಾವಣೆ ವಿಚಾರ (Bangalore City Legislative Council Elections Voting) ನಡೆಸುವ ವಿಚಾರವಾಗಿ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಧಾನ ಪರಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮತಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ ಇಡಬೇಕು. ಕೋರ್ಟ್ ಅನುಮತಿಯಿಲ್ಲದೆ ಫಲಿತಾಂಶ ಪ್ರಕಟಿಸಬಾರದು ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಇನ್ನು ಚುನಾವಣೆಯಲ್ಲಿ 15 ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದೂ ಹೈ ನ್ಯಾಯ ಪೀಠ ಸೂಚಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ರಿಟ್ ಅರ್ಜಿ ಸಲ್ಲಿಸಿ, ಆನೇಕಲ್, ಅತ್ತಿಬೆಲೆ ಮತ್ತು ಮಹದೇವಪುರ ಪುರಸಭೆಯ 15 ನಾಮನಿರ್ದೇಶಿತ ಸದಸ್ಯರ ಮತದಾನ ಪ್ರಶ್ನಿಸಿದ್ದರು.
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದೆ. ನಾಳೆ ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ (Karnataka Legislative Council) 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ (Biennial elections) ಅಧಿಸೂಚನೆ ಪ್ರಕಟವಾಗಿದ್ದು,ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಡಿಸೆಂಬರ್ 10ರಂದು ರಾಜ್ಯ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಎಲೆಕ್ಷನ್ ನಡೆಯಲಿದೆ.
ಇದನ್ನು ಓದಿ:
ಕರ್ನಾಟಕ ವಿಧಾನ ಪರಿಷತ್ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್ನಲ್ಲಿ 25 ಸ್ಥಾನಗಳಿಗೆ ಮತದಾನ
ನಾಳೆ ಶುಕ್ರವಾರ ವಿಧಾನ ಪರಿಷತ್ ದೈವಾರ್ಷಿಕ ಚುನಾವಣೆ: ಮತದಾನ ಹೇಗೆ ಮಾಡಬೇಕು? ವಿವರ ಇಲ್ಲಿದೆ
Published On - 1:23 pm, Thu, 9 December 21