AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್​, ಬದಲಿ ಮಾರ್ಗ ಹೀಗಿದೆ

ಮೈಸೂರು ರಸ್ತೆಯ ಗಾಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಾಮವೇಣುಗೋಪಾಲ ಸ್ವಾಮಿ ರಥೋತ್ಸವದ ಹಿನ್ನೆಲೆ ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದ್ದು, ಬದಲಿ ಸಂಪರ್ಕವನ್ನ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದು ಹೀಗಿದೆ.

ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್​, ಬದಲಿ ಮಾರ್ಗ ಹೀಗಿದೆ
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Mar 31, 2023 | 1:01 PM

Share

ಬೆಂಗಳೂರು: ಮೈಸೂರು ರಸ್ತೆಯ ಗಾಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಾಮವೇಣುಗೋಪಾಲ ಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್​ ಮಾಡಲಾಗಿದ್ದು,  ಏಪ್ರಿಲ್ 1 ರವರೆಗೆ ಬದಲಿ ರಸ್ತೆಯನ್ನ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರಿ ಸೂಚಿಸಿದ್ದಾರೆ. ಹೌದು ಮಾ.31 ರ ಬೆಳಗ್ಗೆ 8 ಗಂಟೆಯಿಂದ ಏಪ್ರಿಲ್ 1 ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ(KSRTC), ಬಿಎಂಟಿಸಿ(BMTC) ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳು ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರವನ್ನ ಪ್ರವೇಶಿಸುವುದನ್ನು ಮತ್ತು ನಿರ್ಗಮಿಸುವುದನ್ನು ನಿಷೇಧಿಸಲಾಗಿದೆ. ಅದಕ್ಕೊಸ್ಕರ ಬದಲಿ ಮಾರ್ಗಗಳನ್ನ ತಿಳಿಸಿದ್ದು ಹೀಗಿವೆ.

ಬದಲಿ ಸಂಪರ್ಕ ರಸ್ತೆಗಳು ಹೀಗಿವೆ

ಇನ್ನು ವಾಹನಗಳು ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡಕ್ಕೆ ಹೋಗಿ ಟಿಂಬರ್ ಯಾರ್ಡ್ ಮೂಲಕ ಮುನೇಶ್ವರ ಬ್ಲಾಕ್‌ನ 50 ಅಡಿ ರಸ್ತೆಯಲ್ಲಿ ಹೊಸಕೆರೆಹಳ್ಳಿ ಮೂಲಕ ದೇವೇಗೌಡ ವೃತ್ತಕ್ಕೆ ಬಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಬಹುದಾಗಿದೆ. ಇನ್ನು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವಿಜಯನಗರದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಮತ್ತು ಬಿಎಚ್‌ಇಎಲ್ ಜಂಕ್ಷನ್‌ನಿಂದ ನಗರಕ್ಕೆ ಹೋಗುವ ವಾಹನಗಳು ಬಾಪೂಜಿ ನಗರ ಜಂಕ್ಷನ್ ಮತ್ತು ಕೆಎಸ್‌ಆರ್‌ಟಿಸಿ ಜಂಕ್ಷನ್‌ನಲ್ಲಿ ಯು-ಟರ್ನ್ ತೆಗೆದುಕೊಳ್ಳಲು ಅನುಮತಿಯಿಲ್ಲ. ಬದಲಾಗಿ ಅವರು ಮೈಸೂರು ರಸ್ತೆಗೆ ಸಂಪರ್ಕಿಸಲು ಬಾಪೂಜಿ ನಗರದ ಮೇಲ್ಸೇತುವೆಯ ಮೂಲಕ ಹೋಗಬಹುದು ಮತ್ತು ಹೊಸಕೆರೆಹಳ್ಳಿ, ಬನಶಂಕರಿ, ಬ್ಯಾಟರಾಯನಪುರ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಬಲಕ್ಕೆ ತೆಗೆದುಕೊಂಡು 50 ಅಡಿ ರಸ್ತೆ ಮತ್ತು ದೇವೇಗೌಡ ವೃತ್ತದ ಮೂಲಕ ನಾಯಂಡಹಳ್ಳಿ ಜಂಕ್ಷನ್‌ಗೆ ತಲುಪಬಹುದು.

ಇದನ್ನೂ ಓದಿ:Bengaluru Mysuru Expressway Toll Price Hike: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಮತ್ತಷ್ಟು ಹೆಚ್ಚಳ

ನಾಯಂಡಹಳ್ಳಿ, ಪಿಇಎಸ್ ವಿಶ್ವವಿದ್ಯಾಲಯ ಮತ್ತು ಕೆರೆಕೋಡಿ ಕಡೆಯಿಂದ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದ್ದು, ಆ ರಸ್ತೆಗಳನ್ನು ತಾತ್ಕಾಲಿಕವಾಗಿ ಏಕಮುಖ ಮಾರ್ಗವಾಗಿ ಬದಲಾಯಿಸಲಾಗಿದೆ. ಬದಲಾಗಿ ವೀರಭದ್ರನಗರ ಸಿಗ್ನಲ್ ದಾಟಿ ಪಿಇಎಸ್ ವಿಶ್ವವಿದ್ಯಾಲಯ ಜಂಕ್ಷನ್‌ನಲ್ಲಿ ಬಲಕ್ಕೆ ಹೋಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Fri, 31 March 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್