ಬೆಂಗಳೂರು: ಮೈಸೂರು ರಸ್ತೆಯ ಗಾಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಾಮವೇಣುಗೋಪಾಲ ಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿದ್ದು, ಏಪ್ರಿಲ್ 1 ರವರೆಗೆ ಬದಲಿ ರಸ್ತೆಯನ್ನ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರಿ ಸೂಚಿಸಿದ್ದಾರೆ. ಹೌದು ಮಾ.31 ರ ಬೆಳಗ್ಗೆ 8 ಗಂಟೆಯಿಂದ ಏಪ್ರಿಲ್ 1 ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ(KSRTC), ಬಿಎಂಟಿಸಿ(BMTC) ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳು ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರವನ್ನ ಪ್ರವೇಶಿಸುವುದನ್ನು ಮತ್ತು ನಿರ್ಗಮಿಸುವುದನ್ನು ನಿಷೇಧಿಸಲಾಗಿದೆ. ಅದಕ್ಕೊಸ್ಕರ ಬದಲಿ ಮಾರ್ಗಗಳನ್ನ ತಿಳಿಸಿದ್ದು ಹೀಗಿವೆ.
ಬದಲಿ ಸಂಪರ್ಕ ರಸ್ತೆಗಳು ಹೀಗಿವೆ
ಇನ್ನು ವಾಹನಗಳು ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡಕ್ಕೆ ಹೋಗಿ ಟಿಂಬರ್ ಯಾರ್ಡ್ ಮೂಲಕ ಮುನೇಶ್ವರ ಬ್ಲಾಕ್‌ನ 50 ಅಡಿ ರಸ್ತೆಯಲ್ಲಿ ಹೊಸಕೆರೆಹಳ್ಳಿ ಮೂಲಕ ದೇವೇಗೌಡ ವೃತ್ತಕ್ಕೆ ಬಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಬಹುದಾಗಿದೆ. ಇನ್ನು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವಿಜಯನಗರದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಮತ್ತು ಬಿಎಚ್‌ಇಎಲ್ ಜಂಕ್ಷನ್‌ನಿಂದ ನಗರಕ್ಕೆ ಹೋಗುವ ವಾಹನಗಳು ಬಾಪೂಜಿ ನಗರ ಜಂಕ್ಷನ್ ಮತ್ತು ಕೆಎಸ್‌ಆರ್‌ಟಿಸಿ ಜಂಕ್ಷನ್‌ನಲ್ಲಿ ಯು-ಟರ್ನ್ ತೆಗೆದುಕೊಳ್ಳಲು ಅನುಮತಿಯಿಲ್ಲ. ಬದಲಾಗಿ ಅವರು ಮೈಸೂರು ರಸ್ತೆಗೆ ಸಂಪರ್ಕಿಸಲು ಬಾಪೂಜಿ ನಗರದ ಮೇಲ್ಸೇತುವೆಯ ಮೂಲಕ ಹೋಗಬಹುದು ಮತ್ತು ಹೊಸಕೆರೆಹಳ್ಳಿ, ಬನಶಂಕರಿ, ಬ್ಯಾಟರಾಯನಪುರ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಬಲಕ್ಕೆ ತೆಗೆದುಕೊಂಡು 50 ಅಡಿ ರಸ್ತೆ ಮತ್ತು ದೇವೇಗೌಡ ವೃತ್ತದ ಮೂಲಕ ನಾಯಂಡಹಳ್ಳಿ ಜಂಕ್ಷನ್‌ಗೆ ತಲುಪಬಹುದು.
ನಾಯಂಡಹಳ್ಳಿ, ಪಿಇಎಸ್ ವಿಶ್ವವಿದ್ಯಾಲಯ ಮತ್ತು ಕೆರೆಕೋಡಿ ಕಡೆಯಿಂದ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದ್ದು, ಆ ರಸ್ತೆಗಳನ್ನು ತಾತ್ಕಾಲಿಕವಾಗಿ ಏಕಮುಖ ಮಾರ್ಗವಾಗಿ ಬದಲಾಯಿಸಲಾಗಿದೆ. ಬದಲಾಗಿ ವೀರಭದ್ರನಗರ ಸಿಗ್ನಲ್ ದಾಟಿ ಪಿಇಎಸ್ ವಿಶ್ವವಿದ್ಯಾಲಯ ಜಂಕ್ಷನ್‌ನಲ್ಲಿ ಬಲಕ್ಕೆ ಹೋಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:57 pm, Fri, 31 March 23