ಪ್ರಯಾಣ ನಿರಾಕರಿಸಿದ್ದಕ್ಕೆ ಬಾಲಕನಿಗೆ 4.75 ಲಕ್ಷ ರೂ. ನೀಡಲು ಲುಫ್ತಾನ್ಸಾ ಏರ್‌ಲೈನ್ಸ್​​ಗೆ ಬೆಂಗಳೂರು ಗ್ರಾಹಕರ ನ್ಯಾಯಾಲಯ ಆದೇಶ

ವಿಮಾನವನ್ನು ಹತ್ತಲು ನಿರಾಕರಿಸಿದ್ದಕ್ಕಾಗಿ ಮರುಪಾವತಿ ಮಾಡುವಂತೆ ಮಹಿಳೆಯು ಕೇಳಿದಾಗ ಲುಫ್ತಾನ್ಸ ಏರ್‌ಲೈನ್ಸ್‌ನ ಕಸ್ಟಮರ್ ಕೇರ್ ವಿಭಾಗವು ಧನಾತ್ಮಕವಾಗಿ ಸ್ಪಂದಿಸಿರಲಿಲ್ಲ. ನಂತರ ಅವರು ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಯಾಣ ನಿರಾಕರಿಸಿದ್ದಕ್ಕೆ ಬಾಲಕನಿಗೆ 4.75 ಲಕ್ಷ ರೂ. ನೀಡಲು ಲುಫ್ತಾನ್ಸಾ ಏರ್‌ಲೈನ್ಸ್​​ಗೆ ಬೆಂಗಳೂರು ಗ್ರಾಹಕರ ನ್ಯಾಯಾಲಯ ಆದೇಶ
ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನ
Follow us
TV9 Web
| Updated By: Ganapathi Sharma

Updated on: Aug 05, 2023 | 3:45 PM

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) 2021 ರಲ್ಲಿ ಕೋವಿಡ್-19 ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ್ತು ಅವರ ಪುತ್ರನಿಗೆ ವಿಮಾನ ಹತ್ತಲು ನಿರಾಕರಿಸಿದ ಜರ್ಮನ್ ಏರ್‌ಲೈನ್ಸ್ ಲುಫ್ತಾನ್ಸಾಗೆ (Lufthansa airline) ಬೆಂಗಳೂರಿನ ಗ್ರಾಹಕ ನ್ಯಾಯಾಲಯ 4.75 ಲಕ್ಷ ರೂಪಾಯಿ ಪಾವತಿಸುವಂತೆ ಆದೇಶಿಸಿದೆ. ಗ್ರೀಕ್​​​​ನಿಂದ ಬಂದ ಕಿರಿಯಾಕಿ ಪೆಟ್ರಿಟಿ ಮತ್ತು ಅವರ ಮಗ ಕೋವಿಡ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದರು. ಗ್ರೀಕ್ ಹುಡುಗನ ಪಾಸ್ಪೋರ್ಟ್ ಅವಧಿ ಮುಗಿದಿತ್ತು. ಬಾಲಕನ ತಂದೆ ಅಶೋಕ್ ಪ್ರಭು ಅವರು ಹೊಸದಿಲ್ಲಿಯಲ್ಲಿರುವ ಗ್ರೀಕ್ ರಾಯಭಾರ ಕಚೇರಿಯಿಂದ ಬಾಲಕನಿಗೆ ತುರ್ತು ಪಾಸ್‌ಪೋರ್ಟ್ ನೀಡಿದ್ದರು ಎಂದು 2021 ರ ಅಕ್ಟೋಬರ್​​ನಲ್ಲಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಉಲ್ಲೇಖಿಸಿತ್ತು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲುಫ್ತಾನ್ಸಾ ಏರ್‌ಲೈನ್ಸ್‌ನ ಗ್ರೌಂಡ್ ಸ್ಟಾಫ್, ತುರ್ತು ಪಾಸ್‌ಪೋರ್ಟ್ ಬಳಸಿ ಜರ್ಮನಿಗೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಗ್ರೀಕ್ ಹುಡುಗನನ್ನು ವಿಮಾನ ಹತ್ತಲು ಬಿಟ್ಟಿರಲಿಲ್ಲ.

ಹುಡುಗನ ತಾಯಿ ಪೆಟ್ರಿಟಿ ನಂತರ ಎಮಿರೇಟ್ಸ್ ಏರ್‌ಲೈನ್ಸ್‌ನಲ್ಲಿ 4.49 ಲಕ್ಷ ರೂಪಾಯಿ ಖರ್ಚು ಮಾಡಿ ಟಿಕೆಟ್‌ಗಳನ್ನು ಬುಕ್ ಮಾಡಿ ದುಬೈ ಮೂಲಕ ಗ್ರೀಕ್​​ಗೆ ತಲುಪಿದರು. ಗ್ರೀಕ್​​ಗೆ ತಲುಪಿದ ನಂತರ ಪೆಟ್ರಿಟಿ ಜರ್ಮನ್ ಫೆಡರಲ್ ಪೋಲಿಸ್‌ಗೆ ಹುಡುಗನ ತುರ್ತು ಪಾಸ್‌ಪೋರ್ಟ್‌ನ ಸಿಂಧುತ್ವದ ಬಗ್ಗೆ ವಿಚಾರಿಸುತ್ತಾ ಪತ್ರ ಬರೆದರು. ಇದಕ್ಕೆ ಪ್ರತಿಕ್ರಿಯಿಸಿದರು ಪೊಲೀಸರು ತುರ್ತು ಪಾಸ್‌ಪೋರ್ಟ್ ಜರ್ಮನಿಯ ಮೂಲಕ ಪ್ರಯಾಣಿಸಲು ಮಾನ್ಯವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನ್ನು ಕೆಎಸ್​ಆರ್​ಟಿಸಿ ಬಸ್​​ಗಳು ಎಡ ಬದಿಯ ಲೇನ್​ನಲ್ಲೇ ಸಂಚರಿಸಬೇಕು

ವಿಮಾನವನ್ನು ಹತ್ತಲು ನಿರಾಕರಿಸಿದ್ದಕ್ಕಾಗಿ ಮರುಪಾವತಿ ಮಾಡುವಂತೆ ಮಹಿಳೆಯು ಕೇಳಿದಾಗ ಲುಫ್ತಾನ್ಸಾ ಏರ್‌ಲೈನ್ಸ್‌ನ ಕಸ್ಟಮರ್ ಕೇರ್ ವಿಭಾಗವು ಧನಾತ್ಮಕವಾಗಿ ಸ್ಪಂದಿಸಿರಲಿಲ್ಲ ಎಂದು ವರದಿಯಾಗಿದೆ.

ಪೆಟ್ರಿಟಿ ಮತ್ತು ಅಶೋಕ್ ಪ್ರಭು ಅವರು 2022 ರ ಮಾರ್ಚ್​​ನಲ್ಲಿ ಬೆಂಗಳೂರಿನ ಶಾಂತಿನಗರದ ಗ್ರಾಹಕ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. 2023ರ ಜುಲೈ 11 ರಂದು ನ್ಯಾಯಾಲಯವು ಲುಫ್ತಾನ್ಸಾ ಏರ್‌ಲೈನ್ಸ್‌ಗೆ ಗ್ರೀಕ್ ಹುಡುಗ ಮತ್ತು ಆಕೆಯ ತಾಯಿಯ ಟಿಕೆಟ್‌ಗಳ ಮರುಪಾವತಿ ಹಣವನ್ನು ಪಾವತಿಸುವಂತೆ ಆದೇಶಿಸಿತು. ಇಷ್ಟೇ ಅಲ್ಲದೆ, ಕೋವಿಡ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಹುಡುಗನಿಗೆ ತೊಂದರೆ ನೀಡಿದ್ದಕ್ಕಾಗಿ ನ್ಯಾಯಾಲಯವು 25,000 ರೂ. ದಂಡವನ್ನೂ ವಿಮಾನಯಾನ ಸಂಸ್ಥೆಗೆ ವಿಧಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ