AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಟ್ರೋ ರವಿ ಪರವಾಗಿ ಸುಳ್ಳು ದೂರು ದಾಖಲಿಸಿದ್ದ ಕಾಟನ್‌ಪೇಟೆ ಇನ್ಸ್‌ಪೆಕ್ಟರ್‌ ಅಮಾನತು

ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರು ದಾಖಲಿಸಿದ್ದ ಕಾಟನ್‌ಪೇಟೆ ಇನ್ಸ್‌ಪೆಕ್ಟರ್‌ ಪ್ರವೀಣ್ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಸ್ಯಾಂಟ್ರೋ ರವಿ ಪರವಾಗಿ ಸುಳ್ಳು ದೂರು ದಾಖಲಿಸಿದ್ದ ಕಾಟನ್‌ಪೇಟೆ ಇನ್ಸ್‌ಪೆಕ್ಟರ್‌ ಅಮಾನತು
ಕಾಟನ್‌ಪೇಟೆ ಪೊಲೀಸ್​ ಠಾಣೆ
TV9 Web
| Edited By: |

Updated on: Jan 10, 2023 | 8:01 PM

Share

ಬೆಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಗೆ ಬೇಕಾಗಿರುವ ಸ್ಯಾಂಟ್ರೋ ರವಿಗಾಗಿ (Snatro Ravi) ಪೊಲೀಸರು ಬೆಲೆ ಬೀಸಿದ್ದಾರೆ. ಆದರೆ ಇದೇ ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರು ದಾಖಲಿಸಿದ್ದ ಕಾಟನ್‌ಪೇಟೆ ಇನ್ಸ್‌ಪೆಕ್ಟರ್‌ (Inspector) ಪ್ರವೀಣ್ ಸೇವೆಯಿಂದ ಅಮಾನತು ಮಾಡಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಇನ್ನೂ ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದರು.

ಸ್ಯಾಂಟ್ರೋ ರವಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆತನಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಬಗ್ಗೆ ಎಲ್ಲಾ ರೀತಿಯ ತನಿಖೆಗೆ ಆದೇಶಿಸಿದ್ದೇನೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಹಲವು ಪ್ರಕರಣಗಳು​ ದಾಖಲಾಗಿತ್ತು. ಆದರೆ ಇದೆಲ್ಲ ಕಾಂಗ್ರೆಸ್ ಕಾಲದಲ್ಲಿ ನಡೆದಿರುವುದು. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲೇ ಬಿಡುಗಡೆಯಾಗಿದ್ದ. ಸ್ಯಾಂಟ್ರೋ ರವಿದ್ದು 20 ವರ್ಷದ ಇತಿಹಾಸ ಇದೆ. ಯಾವ ಯಾವ ಸರ್ಕಾರ ಇತ್ತು, ಯಾವ ಯಾವ ಮಂತ್ರಿಗಳಿದ್ದರೂ, ಯಾರ ಜೊತೆ ಸಂಭಂದ ಇತ್ತು ಎಲ್ಲವೂ ತನಿಖೆ ಆಗಲಿದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದರು.

ಸ್ಯಾಂಟ್ರೋ ರವಿ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ. ಬೇರೆ ಬೇರೆ ಆಯಾಮದಲ್ಲಿ‌ ತನಿಖೆ ಆಗುತ್ತಿದ್ದು, ಎಲ್ಲಾ ರೀತಿಯ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುತ್ತದೆ. ಆತನ ಮೇಲೆ ದಾಖಲಾಗಿರುವ ಪ್ರತಿಯೊಂದು ಪ್ರಕರಣಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳಿದರು.

ಮಹಿಳೆ ಮೇಲೆ ಸುಳ್ಳು ಕೇಸ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಕಲಿ ಪ್ರಕರಣ ದಾಖಲಿಸಿ ಬಂಧನ ಮಾಡಿರುವುದು ಗೊತ್ತಾಗಿದೆ. ಈಗಾಗಲೇ ವರದಿ ಸಿದ್ದಪಡಿಸಲಾಗಿದೆ. ಈ ಸಂಬಂಧ ಕಾನೂನು ಕ್ರಮ ಆಗುತ್ತದೆ. ಯಾವ ಅಧಿಕಾರಿ ಇದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?