ಬೆಂಗಳೂರು: ಮನೆ ಹಿತ್ತಲಿನಲ್ಲಿ ಗಾಂಜಾ ಬೆಳಸಿ ರೀಲ್ಸ್​ ಮಾಡಿದ್ದ ಮಹಿಳೆ ಪೊಲೀಸರ ಅತಿಥಿ

ಬೆಂಗಳೂರಿನ ಸದಾಶಿವನಗರದಲ್ಲಿ, ತಮ್ಮ ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆಸಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಊರ್ಮಿಳಾ ಮತ್ತು ಗುರುಂಗ್ ಎಂಬ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದ್ದು, 54 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಊರ್ಮಿಳಾ ರೀಲ್ಸ್‌ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದ್ದದ್ದರಿಂದ ಈ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಬೆಂಗಳೂರು: ಮನೆ ಹಿತ್ತಲಿನಲ್ಲಿ ಗಾಂಜಾ ಬೆಳಸಿ ರೀಲ್ಸ್​ ಮಾಡಿದ್ದ ಮಹಿಳೆ ಪೊಲೀಸರ ಅತಿಥಿ
ಗಾಂಜಾ, ಆರೋಪಿ ಊರ್ಮಿಳಾ

Updated on: Nov 09, 2024 | 12:29 PM

ಬೆಂಗಳೂರು, ನವೆಂಬರ್​ 09: ಮನೆಯ ಹೂವಿನ ಕುಂಡದಲ್ಲಿ ಗಾಂಜಾ (Ganja) ಗಿಡ ಬೆಳೆದಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸರು (Police) ಬಂಧಿಸಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನೇಪಾಳ (Nepal) ಮೂಲದ ಊರ್ಮಿಳಾ ಹಾಗೂ ಗುರುಂಗ್ ಗಾಂಜಾ ಬೆಳಸಿದ್ದ ಆರೋಪಿಗಳು. ದಂಪತಿ ವಿರುದ್ಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಂಪತಿ ಸದಾಶಿವನಗರದ ಎಮ್​ಎಸ್​ಆರ್​ ನಗರದಲ್ಲಿ ವಾಸವಾಗಿದ್ದರು. ದಂಪತಿ ಮನೆ ಬಾಲ್ಕನಿಯಲ್ಲಿದ್ದ ಕುಂಡದಲ್ಲಿ ಗಾಂಜಾ ಗಿಡ ಬೆಳಸಿದ್ದರು. ಇತ್ತೀಚಿಗೆ ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್​ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್​ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದಾಗ ಗಾಂಜಾ ಗಿಡ ಪತ್ತೆಯಾಗಿದೆ. 15 ವಿವಿಧ ಮಾದರಿಯ ಹೂವಿನ ಗಿಡಗಳ ಮಧ್ಯೆ ದಂಪತಿ ಗಾಂಜಾ ಗಿಡ ಬೆಳೆಸಿದ್ದರು. 54 ಗ್ರಾಂ ಗಾಂಜಾ ಸೊಪ್ಪನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?

ಬೆಂಗಳೂರು ಸಿಸಿಬಿ ಅಧಿಕಾರಿಗಳು ಮತ್ತು ಜೆಬಿ ನಗರ ಪೊಲೀಸರು ಜಂಟಿಯಾಗಿ ಬೆಂಗಳೂರು ಜೀವನ್ ಭೀಮಾನಗರ ಹಾಗೂ ಆವಲಹಳ್ಳಿಯಲ್ಲಿನ ನಕಲಿ ಲೈಜಾಲ್ ಹಾಗೂ ಹಾರ್ಪಿಕ್ ಗೋಡಾನಗಳ ಮೇಲೆ ದಾಳಿ ಮಾಡಿ, ಕೋಟ್ಯಾಂತರ ಮೌಲ್ಯದ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಗೋಡನ್​ಗಳು ಅನಿಲ್ ಪಟೇಲ್ ಹಾಗೂ ಅನಂತ್ ಪಟೇಲ್ ಎಂಬುವವರಿಗೆ ಸೇರಿವೆ. ಇಬ್ಬರೂ ಮಾಲೀಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೇಂದಿ ಸಂಗ್ರಹಿಸಿದ್ದ ಮನೆ ಮೇಲೆ ದಾಳಿ

ರಾಯಚೂರು: ಸೇಂದಿ ದಂಧೆ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದೆ. ಅಧಿಕಾರಿಗಳು ಶುಕ್ರವಾರ ತಡರಾತ್ರಿ ರಾಯಚೂರು ನಗರದ ಗದ್ವಾಲ್ ರಸ್ತೆಯ ಓಣಿಯಲ್ಲಿ ಸೇಂದಿ ಸಂಗ್ರಹಿಸಿದ್ದ ಮನೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ಕೈಗೆ ಆರೋಪಿ ವಾಹಿದ್ ಅಲಿಯಾಸ್​ ಚಿಮಟಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾನೆ.

ಆರೋಪಿ ವಾಹಿದ್ ಮನೆ ಮೇಲೆ ದಾಳಿ ವೇಳೆ ನೂರಾರು ಲೀಟರ್ ಸೇಂದಿ ಪತ್ತೆಯಾಗಿದೆ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿ ವಾಹಿದ್ ಅಲಿಯಾಸ್​ ಚಿಮಟಿಯನ್ನು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Sat, 9 November 24