ಭ್ರಷ್ಟಾಚಾರ ಆರೋಪ ಬೆನ್ನಲ್ಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ

ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್‌ರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಚೀಫ್ ಎಕ್ಸಿಕ್ಯುಟಿವ್) ಆಗಿದ್ದ ಸಂಗಪ್ಪರವರು ನೂತನ ಬೆಂಗಳೂರು ಡಿಸಿಯಾಗಿ ನೇಮಕಗೊಂಡಿದ್ದಾರೆ.

ಭ್ರಷ್ಟಾಚಾರ ಆರೋಪ ಬೆನ್ನಲ್ಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್
TV9kannada Web Team

| Edited By: Ayesha Banu

Jul 01, 2022 | 9:54 PM

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್‌ರನ್ನು(J Manjunath, I.A.S) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಆದೇಶದ ವರೆಗೆ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಇನ್ನು ನೂತನ ಬೆಂಗಳೂರು ಡಿಸಿಯಾಗಿ ಸಂಗಪ್ಪರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಚೀಫ್ ಎಕ್ಸಿಕ್ಯುಟಿವ್) ಆಗಿದ್ದ ಸಂಗಪ್ಪರವರು ನೂತನ ಬೆಂಗಳೂರು ಡಿಸಿಯಾಗಿ ನೇಮಕಗೊಂಡಿದ್ದಾರೆ. ನಿನ್ನೆಯಷ್ಟೇ ಮಂಜುನಾಥ್ ರನ್ನ ಎರಡನೇ ಬಾರಿ ಇಡೀ ದಿನ ಎಸಿಬಿ ವಿಚಾರಣೆ ನಡೆಸಿತ್ತು. ಭೂ ವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪದಡಿ ಹತ್ತು ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಲಾಗಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಮಂಜುನಾಥ್‌ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ. ಪ್ರಕರಣದಲ್ಲಿ ಮಂಜುನಾಥ್‌.ಜೆ ಮೂರನೇ ಆರೋಪಿಯಾಗಿದ್ದಾರೆ. ಸದ್ಯ ಭ್ರಷ್ಟಾಚಾರ ಆರೋಪ ಬೆನ್ನಲ್ಲೆ ಡಿ.ಸಿ ಮಂಜುನಾಥ್ ಎತ್ತಂಗಡಿ ಮಾಡಲಾಗಿದೆ. ಇದನ್ನೂ ಓದಿ: Malaysia Open 2022: ಕ್ವಾರ್ಟರ್ ಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಸಿಂಧು, ಪ್ರಣಯ್ ಪಯಣವೂ ಅಂತ್ಯ

ಬೆಂಗಳೂರು ಜಿಲ್ಲಾಧಿಕಾರಿಗೆ ಫುಲ್ ಎಸಿಬಿ ಗ್ರಿಲ್ ಬೆಂಗಳೂರಿನ ಎಸಿಬಿ ಕಚೇರಿಯಲ್ಲಿಇಬ್ಬರು ಡಿವೈಎಸ್ಪಿ ಗಳ ತಂಡವು ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ವಿಚಾರಣೆ ನಡೆಸುತ್ತಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಇನ್ನೂ ಮುಂದುವರಿದಿದೆ. ಇಡೀ ಪ್ರಕರಣ ಸಂಬಂಧ ವಿಸ್ತೃತ ತನಿಖೆ ನಡೆಸಿ ಜುಲೈ 4 ರಂದು ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.

ಡಿವೈಎಸ್ ಪಿ ಬಸವರಾಜ್ ಮಗದುಮ್ ಅವರು ಭ್ರಷ್ಟಾಚಾರ ಪ್ರಕರಣದ ಸಂಬಂಧ ಡಿಸಿ ಮಂಜುನಾಥ್ ರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಡಿ ಸಿ ಮಂಜುನಾಥ್ ವಿಚಾರಣೆ ನಡೆದಿದೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಅವರು ದಾಳಿಗೆ ಸಂಬಂಧಿಸಿದಂತೆ ಎಸ್ ಪಿ ಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಎಸಿಬಿ ಎಸ್ ಪಿ ಗಳಾದ ಉಮಾ ಪ್ರಶಾಂತ್, ಹರೀಶ್ ಪಾಂಡೆ, ಯತೀಶ್ ಚಂದ್ರ ಎಡಿಜಿಪಿಗೆ ಮಾಹಿತಿ ಒದಗಿಸುತ್ತಿದ್ದಾರೆ. ದಾಳಿ ವೇಳೆ ಹಾಗೂ ಆ ಬಳಿಕ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜಮೀನು ಸ್ವಾಮ್ಯದ ವಿಷಯದಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಲಂಚ ಸ್ವೀಕರಿಸುವಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಉಪ ತಹಶೀಲ್ದಾರ್ ಮಹೇಶ್ ಮತ್ತು ಸಹಾಯಕ ಸಿಬ್ಬಂದಿಯನ್ನು ಬಂಧಿಸಿದ್ದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada