ಇ-ಕೆವೈಸಿಗೆ ಹಣಕ್ಕೆ ಬೇಡಿಕೆ: ಬೆಂಗಳೂರಿನ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

ಬೆಂಗಳೂರಿನ ನ್ಯಾಯಬೆಲೆ ಅಂಗಡಿಯೊಂದು ಇ-ಕೆವೈಸಿ ಪ್ರಕ್ರಿಯೆಗೆ ಪಡಿತರ ಚೀಟಿದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಪರವಾನಿಗೆಯನ್ನು ಅಮಾನತುಗೊಳಿಸಲಾಗಿದೆ. ವಿಡಿಯೋ ವೈರಲ್ ಆಗಿದ್ದು, ತನಿಖೆ ನಂತರ ಆರೋಪ ದೃಢಪಟ್ಟಿದೆ. ಸಂಬಂಧಿತ ಆಹಾರ ನಿರೀಕ್ಷಕರಿಗೂ ನೋಟಿಸ್ ನೀಡಲಾಗಿದ್ದು, ಸಚಿವರು ಇಂತಹ ದುರ್ನಡತೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದ್ದಾರೆ.

ಇ-ಕೆವೈಸಿಗೆ ಹಣಕ್ಕೆ ಬೇಡಿಕೆ: ಬೆಂಗಳೂರಿನ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
ಪ್ರಾತಿನಿಧಿಕ ಚಿತ್ರ
Image Credit source: Getty images

Updated on: Nov 13, 2026 | 7:52 PM

ಬೆಂಗಳೂರು, ನವೆಂಬರ್​ 13: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆ ಬೆಂಗಳೂರಿನ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಮಾನತುಗೊಳಿಸಿದೆ. ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೋಳೂರು ಪಾಳ್ಯ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಂದ ಹಣ ಕೇಳಿದ್ದರು ಎನ್ನಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಪರಿಶೀಲನೆ ಬಳಿಕ ಪರವಾನಗಿ ಅಮಾನತು

ವಿಡಿಯೋ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಲಯದ ಜಂಟಿ ನಿರ್ದೇಶಕರು ಶುಕ್ರವಾರದಿಂದಲೇ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಯ ಪರವಾನಗಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Loading...

ಇದನ್ನೂ ಓದಿ: ಇನ್ನೂ 41 ಲಕ್ಷ ಜನರ ಇ-ಕೆವೈಸಿ ಬಾಕಿ! ನ 10ರೊಳಗೆ‌ ಕಡ್ಡಾಯವಾಗಿ ಮಾಡಿಸುವಂತೆ ಪಡಿತರ ಚೀಟಿದಾರರಿಗೆ ಸೂಚನೆ

ಇಂತಹ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾದ ಸಂಬಂಧಪಟ್ಟ ಆಹಾರ ನಿರೀಕ್ಷಕರಿಗೂ ಇಲಾಖೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಇ-ಕೆವೈಸಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಹಾಗೂ ಪಡಿತರ ಚೀಟಿದಾರರಿಂದ ಹಣ ಪಡೆಯದಂತೆ ಹಲವು ಬಾರಿ ನಿರ್ದೇಶನ ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿ ನಿರ್ಲಕ್ಷ್ಯ ತೋರಿದ್ದು, ಕರ್ತವ್ಯಲೋಪ ಎಸಗಿದ್ದಾರೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್, ‘ಇ-ಕೆವೈಸಿ ಮಾಡಿಸಲು ಹಣಕ್ಕೆ ಬೇಡಿಕೆ ಇಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ’ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 pm, Fri, 13 November 26

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us