AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

ಬೆಂಗಳೂರಿನಲ್ಲಿ ತೀವ್ರಗೊಂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದ ಹೋಟೆಲ್‌ಗಳು ಇಡ್ಲಿ-ದೋಸೆ ಸೇರಿದಂತೆ ಆಹಾರ ಪದಾರ್ಥಗಳ ಬೆಲೆಯನ್ನು ಹೆಚ್ಚಿಸಿವೆ. ಗ್ರಾಹಕರ ಜೇಬಿಗೆ ಬಿಸಿ ತಟ್ಟಿದ್ದು, ಹಲವು ಹೋಟೆಲ್‌ಗಳಲ್ಲಿ ಬೆಲೆ ಏರಿಕೆ ಕಂಡಿದೆ. ಸರ್ಕಾರ ಶೀಘ್ರ ಗ್ಯಾಸ್ ಪೂರೈಕೆಯನ್ನು ಸರಿಪಡಿಸಲು ಹೋಟೆಲ್ ಮಾಲೀಕರು ಆಗ್ರಹಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?
ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ!
Vinay Kashappanavar
| Edited By: |

Updated on:Mar 14, 2026 | 8:06 AM

Share

ಬೆಂಗಳೂರು, ಮಾರ್ಚ್​ 14: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್​ಪಿಜಿ ( LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಬೆಂಗಳೂರಿನ ಹೋಟೆಲ್ ಮಾಲೀಕರಿಗೂ ಇದರ ಬಿಸಿ ತಟ್ಟಿರುವುದು ಹೊಸ ವಿಷಯವೇನಲ್ಲ. ಹೀಗಿರುವಾಗ ಹೋಟೆಲ್ ಉದ್ಯಮವನ್ನು ಉಳಿಸಿಕೊಳ್ಳಲು ಕೆಲ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿಸಲು ಮುಂದಾಗಿದ್ದಾರೆ. ಇದರಿಂದ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಗ್ರಾಹಕ ಜೇಬಿಗೆ ಬಿಸಿ ಮುಟ್ಟಿಸಿವೆ.

ದುಬಾರಿ ಮೊತ್ತದಲ್ಲಿ ಸಿಲಿಂಡರ್ ಮಾರಾಟ

ಯುದ್ಧದ ಪರಿಸ್ಥಿತಿಯಲ್ಲಿ ಸಾಮಾನ್ಯವಾಗಿ ದೊರೆಯುವ ಬೆಲೆಯಿಗಿಂತ ಒನ್ ಟು ಡಬಲ್ ದರ ನೀಡಿ ಸಿಲಿಂಡರ್ ಖರೀದಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ. ಹೋಟೆಲ್ ವ್ಯವಹಾರವನ್ನು ನಿಲ್ಲಿಸಲು ಸಾಧ್ಯವಿಲ್ಲದ ಕಾರಣ ಹೆಚ್ಚುವರಿ ಹಣ ನೀಡಿ ಗ್ಯಾಸ್ ಖರೀದಿಸಿ ಹೋಟೆಲ್ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹೆಚ್ಚುವರಿ ಖರ್ಚಿನ ಪರಿಣಾಮವಾಗಿ ಇದೀಗ ಗ್ರಾಹಕರಿಗೂ ಬಿಗ್ ಶಾಕ್ ಎದುರಾಗಿದೆ. ಗ್ಯಾಸ್ ಕೊರತೆಯ ಹಿನ್ನಲೆಯಲ್ಲಿ ಹಲವು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಸಹ ಏರಿಕೆ ಕಂಡಿದೆ.

ವಿಶೇಷವಾಗಿ ಶಿವಾನಂದ ಸರ್ಕಲ್ ಪ್ರದೇಶದಲ್ಲಿರುವ ಬೆಂಗಳೂರು ಕೆಫೆ ಸೇರಿದಂತೆ ಕೆಲವು ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ದರವನ್ನು ಹೆಚ್ಚಿಸಲಾಗಿದೆ. ಎಲ್ಲ ತಿಂಡಿಗಳ ಮೇಲೂ ಸುಮಾರು 10 ರೂಪಾಯಿ ಹೆಚ್ಚುವರಿ ದರ ವಿಧಿಸಲಾಗಿದೆ. ಹೋಟೆಲ್ ಮಾಲೀಕರು ಹಳೆಯ ದರದ ಪಕ್ಕದಲ್ಲೇ ಹೊಸ ದರವನ್ನು ಪ್ರದರ್ಶಿಸಿ ಗ್ರಾಹಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ಹಿಂದಿನ ದರ – ಇಂದಿನ ದರ (ರೂ.ಗಳಲ್ಲಿ)

  • ಇಡ್ಲಿ – 30 -40
  • ವಡೆ – 30 -40
  • ರವಾ ಇಡ್ಲಿ 40-50
  • ಖಾರಾ ಬಾತ್ 30-40
  • ಕೇಸರಿ ಬಾತ್ 30-40
  • ಪಲಾವ್ – 50 -60
  • ಪೂರಿ ಸಾಗು – 60-70
  • ಸೆಟ್ ದೋಸೆ 60-70
  • ಮಸಾಲಾ ದೋಸೆ – 60-70
  • ರೈಸ್ ಸಾಂಬಾರ್ – 70-80
  • ಊಟ – 90 -100
  • ರೋಟಿ 90-100

ಗ್ಯಾಸ್ ಕೊರತೆ ಹಾಗೂ ಹೆಚ್ಚುತ್ತಿರುವ ಖರ್ಚಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಆದರೆ ಬೆಲೆ ಏರಿಕೆಯಿಂದ ಸಾಮಾನ್ಯ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾಸ್ ಸರಬರಾಜನ್ನು ಶೀಘ್ರದಲ್ಲಿ ಸರಿಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೋಟೆಲ್ ಮಾಲೀಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 am, Sat, 14 March 26

Follow Us