AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಚಿನ್ನದ ಬೆಲೆಯಲ್ಲಿ ನಿರಂತರ ಏರುಪೇರುಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಭಾರೀ ಬೇಡಿಕೆ ಹೆಚ್ಚಿದೆ. 2, 4, 6, 8 ಗ್ರಾಂ ನಾಣ್ಯಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಭವಿಷ್ಯದಲ್ಲಿ ಚಿನ್ನದ ದರ ಏರಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿ ಹೂಡಿಕೆಗಾಗಿ ಜನರು ಕಾಯಿನ್‌ಗಳನ್ನು ಕೊಳ್ಳುತ್ತಿದ್ದು, ಅಂಗಡಿಗಳು ಬೇಡಿಕೆ ಪೂರೈಸಲು ಪರದಾಡುತ್ತಿವೆ.

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!
ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ! Image Credit source: The economic times
ವಿನಯ್​ ಕಾಶಪ್ಪನವರ್​
| Edited By: |

Updated on: Mar 27, 2026 | 8:21 AM

Share

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ.

ಉತ್ತಮ ಲಾಭ ಪಡೆಯುವ ನಿರೀಕ್ಷೆ

ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ 2 ಮತ್ತು 4 ಗ್ರಾಂ ಗೋಲ್ಡ್ ಕಾಯಿನ್‌ಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಉತ್ತಮ ಲಾಭ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಜನರು ಹೂಡಿಕೆಗಾಗಿ ಕಾಯಿನ್‌ಗಳನ್ನು ಖರೀದಿಸುತ್ತಿದ್ದಾರೆ.

ಚಿನ್ನದ ದರದಲ್ಲಿ ಅಸ್ಥಿರತೆ

ಇನ್ನೊಂದೆಡೆ, ಕಳೆದ ಮೂರು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಅಸ್ಥಿರತೆ ಕಂಡುಬಂದಿದೆ. ನಿನ್ನೆ ಒಂದೇ ದಿನ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,450 ರೂಪಾಯಿ ಏರಿಕೆಯಾಗಿದೆ. ಮಾರ್ಚ್ 23ರಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,635 ರೂಪಾಯಿಯಾಗಿದ್ದು, ಎರಡು ದಿನಗಳಲ್ಲಿ 345 ರೂಪಾಯಿ ಏರಿಕೆಯಾಗಿದೆ. ಆದರೆ, ಇಂದು ಮಾರುಕಟ್ಟೆ ಆರಂಭದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,465 ರೂಪಾಯಿಯಾಗಿದ್ದು, ಸಂಜೆ ವೇಳೆಗೆ 215 ರೂಪಾಯಿ ಇಳಿಕೆಯಾಗಿ 13,250 ರೂಪಾಯಿಗೆ ತಲುಪಿದೆ.

ಇದನ್ನೂ ಓದಿ ಚಿನ್ನದ ದರ ಹಾವು-ಏಣಿ ಆಟದ ಮಧ್ಯೆ ಬೆಂಗಳೂರಿನಲ್ಲಿ ಅಕ್ಷಯ ತೃತೀಯಕ್ಕೆ ಈಗಲೇ ಗೋಲ್ಡ್ ಬುಕ್ಕಿಂಗ್ ಜೋರು! ಜ್ಯುವೆಲ್ಲರಿಗಳಲ್ಲಿ ಕ್ಯೂ

ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗಬಹುದು ಎಂಬ ಭಯದಲ್ಲಿ ಗ್ರಾಹಕರು ಕಡಿಮೆ ದರದಲ್ಲಿ ಚಿನ್ನ ಖರೀದಿಸಲು ಮುಂದಾಗಿದ್ದಾರೆ. ಆಭರಣಗಳಿಗಿಂತ ಗೋಲ್ಡ್ ಕಾಯಿನ್‌ಗಳ ಮೇಲೆ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ