AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ

ಬೆಂಗಳೂರಿನಲ್ಲಿ ಮೇ 28ರಂದು IMD ಯೆಲ್ಲೋ ಅಲರ್ಟ್ ನಿಜವಾಗಿದ್ದು, ಸಂಜೆ 40-50 ಕಿ.ಮೀ ವೇಗದ ಧೂಳಿನ ಬಿರುಗಾಳಿ ಮತ್ತು ಧಾರಾಕಾರ ಮಳೆ ಅಪ್ಪಳಿಸಿದೆ. ಇದರಿಂದ ರಸ್ತೆಗಳಲ್ಲಿ ಧೂಳು ಆವರಿಸಿ ಗೋಚರತೆ ಕಡಿಮೆಯಾಗಿತ್ತು. ಮಳೆ ನೀರು ಹರಿದು ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದರು. ಮುನ್ನೆಚ್ಚರಿಕೆಯಾಗಿ ಬೆಸ್ಕಾಂ ವಿದ್ಯುತ್ ಕಡಿತಗೊಳಿಸಿದೆ. ಸಾರ್ವಜನಿಕರು ಅನಗತ್ಯ ಸಂಚಾರದಿಂದ ದೂರವಿರುವಂತೆ ಸೂಚಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 28, 2026 | 7:51 PM

Share

ಬೆಂಗಳೂರು, ಮೇ,28: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ (IMD) ನೀಡಿದ್ದ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಅಕ್ಷರಶಃ ನಿಜವಾಗಿದೆ. ಇದೀಗ ಸಿಲಿಕಾನ್ ಸಿಟಿಯಾದ್ಯಂತ ಹವಾಮಾನ ಸಂಪೂರ್ಣ ತಲೆಕೆಳಗಾಗಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ (Gusty Winds) ಮತ್ತು ಗುಡುಗು-ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆರಂಭವಾಗಿದೆ. ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ದಿಢೀರ್ ಆಗಿ ಕಪ್ಪು ಮೋಡಗಳು ಆವರಿಸಿದವು. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ ವಾಹನ ಸವಾರರಿಗೆ ರಸ್ತೆ ಸರಿಯಾಗಿ ಕಾಣಿಸದಷ್ಟು (Reduced Visibility) ಧೂಳು ಆವರಿಸಿತ್ತು. ಅದರ ಬೆನ್ನಲ್ಲೇ ಮೆಜೆಸ್ಟಿಕ್, ಕಾರ್ಪೊರೇಷನ್, ಎಂ.ಜಿ. ರಸ್ತೆ, ಯಶವಂತಪುರ, ಇಂದಿರಾನಗರ, ವೈಟ್‌ಫೀಲ್ಡ್, ಜಯನಗರ ಮತ್ತು ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಬಹುತೇಕ ಎಲ್ಲಾ ಭಾಗಗಳಲ್ಲಿ ಮಳೆ ಸುರಿಯುತ್ತಿದೆ.

ಕಛೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಸಾರ್ವಜನಿಕರು ಮತ್ತು ದ್ವಿಚಕ್ರ ವಾಹನ ಸವಾರರು ದಿಢೀರ್ ಮಳೆಗೆ ಸಿಲುಕಿ ರಸ್ತೆ ಬದಿಯಲ್ಲಿ ಆಶ್ರಯ ಪಡೆದಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿರುವುದರಿಂದ ಹೆದ್ದಾರಿ ಹಾಗೂ ಫ್ಲೈಓವರ್‌ಗಳ ಮೇಲೆ ಭಾರಿ ಸಂಚಾರ ದಟ್ಟಣೆ (Traffic Jam) ಉಂಟಾಗಿದೆ. ಬಿರುಗಾಳಿಯ ರಭಸಕ್ಕೆ ನಗರದ ಕೆಲವು ಭಾಗಗಳಲ್ಲಿ ಮರದ ರೆಂಬೆಗಳು ಮುರಿದು ಬಿದ್ದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬೆಸ್ಕಾಂ (BESCOM) ಹಲವು ಏರಿಯಾಗಳಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: ನಾಳೆಯಿಂದ 3 ದಿನ ರಾಜ್ಯಾದ್ಯಂತ ಭಾರಿ ಗುಡುಗು, ಸಿಡಿಲು ಸಹಿತ ಮಳೆ; ಈ ಜಿಲ್ಲೆಗಳಿಗೆ ಆರೆಂಜ್‌ – ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 2 ರಿಂದ 3 ಗಂಟೆಗಳ ಕಾಲ ಮಳೆಯ ಆರ್ಭಟ ಹೀಗೆಯೇ ಮುಂದುವರಿಯಲಿದ್ದು, ಸಾರ್ವಜನಿಕರು ಅನಗತ್ಯವಾಗಿ ರಸ್ತೆಗೆ ಇಳಿಯದಂತೆ ಮತ್ತು ಜಾಗರೂಕರಾಗಿರುವಂತೆ ಬಿಬಿಎಂಪಿ (BBMP) ಹಾಗೂ ಟ್ರಾಫಿಕ್ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More